ಬೆಳಗಾವಿ | ರಾಯಬಾಗವನ್ನು ಬರಪೀಡಿತ ತಾಲೂಕೆಂದು ಘೋಷಿಸಲು ಆಗ್ರಹ

Date:

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ರಾಯಬಾಗ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ರಾಯಭಾಗ ತಾಲೂಕನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಬೇಕು. ರೈತರ ಸಾಲ ಮನ್ನಾ ಮಾಡಬೇಕು. ಕೃಷ್ಣ ಎಡದಂಡೆ ಕಾಲುವೆಗೆ ನೀರು ಹರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡ ಗಣೇಶ ಇಳಿಗೇರ, “ರಾಯಬಾಗ ತಾಲೂಕಿನ ರೈತರಿಗೆ ಆಗುತ್ತಿರುವ ಅನ್ಯಾಯ ಕೇಳುವರಾರು? ರೈತರ ಕಣ್ಣೀರು ಅಧಿಕಾರಿಗಳಿಗೆ ಕೇಳುತ್ತಿಲ್ಲ. ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...