ಬೆಳಗಾವಿ | ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ ಮಹಾರಾಷ್ಟ್ರದತ್ತ ತೆರಳುವ ಬಸ್ ಸ್ಥಗಿತ

Date:

ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧಿಸಬೇಕು ಎಂಬ ಒತ್ತಾಯದೊಂದಿಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಬೆಳಗಾವಿ ನಗರದಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಶನಿವಾರ ಬೆಳಿಗ್ಗೆಯಿಂದಲೇ ಬೆಳಗಾವಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸರ್ವಿಸ್‌ಗಳು ಎಂದಿನಂತೆ ಕಾರ್ಯಾಚರಿಸುತ್ತಿದ್ದು, ಹೋಟೆಲ್‌ಗಳು ಹಾಗೂ ಅಂಗಡಿಗಳು ಸಹ ಸಾಮಾನ್ಯ ಸ್ಥಿತಿಯಲ್ಲೇ ತೆರೆಯಲ್ಪಟ್ಟಿವೆ. ಆದರೆ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿಯಿಂದ ಮಹಾರಾಷ್ಟ್ರದತ್ತ ತೆರಳುವ ಹಾಗೂ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುವ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ನಗರದ ಪ್ರಮುಖ ವೃತ್ತಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸಲಾಗಿದೆ. ಬಂದ್‌ಗೆ ಬೆಂಬಲ ಸೂಚಿಸಿ ಕರ್ನಾಟಕ ರಕ್ಷಣಾ ವೇದಿಕೆಯ (ಶಿವರಾಮೇಗೌಡ ಬಣ) ಕಾರ್ಯಕರ್ತರು ಕೇಂದ್ರೀಯ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...