ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಕಬ್ಬು ತೋಟಕ್ಕೆ ಬೆಂಕಿ ಹೊತ್ತಿಕೊಂಡು ಎಂಟು ಎಕರೆ ಕಬ್ಬು ಬೆಳೆ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಲಕ್ಷ್ಮಣ ಮುರಿಗೆಪ್ಪ ಶೇಗಾವಿ ಎಂಬುವವರಿಗೆ ಸೇರಿದ ಸುಮಾರು ಎಂಟು ಎಕರೆ ಕಬ್ಬು ತೋಟದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಬ್ಬು ಬೆಳೆ ಬೆಂಕಿಗೆ ಆಹುತಿಯಾಯಿತು.
ಬೆಂಕಿ ತಗಲುತ್ತಿದ್ದಂತೆಯೇ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ, ಅಷ್ಟರಲ್ಲೇ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಬೆಳೆ ಸಂಪೂರ್ಣವಾಗಿ ನಾಶವಾಯಿತು.
ಘಟನೆಯ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





