ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಮಹೇಶ ಬಸಯ್ಯ ಉಜನಿಮಠ (33) ಎಂಬಾತನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮನೆಯ ಮುಂದೆ ಹಾಯ್ದಾಡುವ ದಾರಿಯ ವಿಚಾರವಾಗಿ ಉಂಟಾದ ವೈಷಮ್ಯದಿಂದಾಗಿ ಇಬ್ಬರ ನಡುವೆ ಪದೇಪದೇ ಜಗಳ ನಡೆಯುತ್ತಿತ್ತು. ಘಟನೆ ದಿನ ಮಹೇಶ ಮನೆಗೆ ಬರುವ ವೇಳೆ ಆರೋಪಿತನು ಕುಡಗೋಲಿನಿಂದ ಹಿಂದಿನಿಂದ ದಾಳಿ ನಡೆಸಿ ಕುತ್ತಿಗೆಗೆ ಗಂಭೀರ ಗಾಯಗೊಳಿಸಿದ್ದಾನೆ. ಪರಿಣಾಮವಾಗಿ ಮಹೇಶ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಕುರಿತು ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಹಳೆಯ ದ್ವೇಷವೇ ಕೊಲೆಗೆ ಕಾರಣವೆಂದು ಪತ್ತೆ ಹಚ್ಚಿದ್ದಾರೆ. ಮಾರ್ಚ್ 18ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ
ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಸರಗಿ ಹಾಗೂ ಡಿಎಸ್ಪಿ ವೀರಯ್ಯ ಹಿರೇಮಠ ಅವರ ಮಾರ್ಗದರ್ಶನದಲ್ಲಿ ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ ಹೆಚ್.ಕೆ ಪಾಟೀಲ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.




