ಬೆಳಗಾವಿ : ಗೋವಿನ ಜೋಳ ಖರೀದಿ ಕೇಂದ್ರ ಆರಂಭಿಸುವಂತೆ ರೈತರ ಆಗ್ರಹ

Date:

ಗೋವಿನ ಜೋಳ ಮತ್ತು ಹೆಸರು ಬೆಳೆ ಖರೀದಿಯಲ್ಲಿ ನಡೆಯುತ್ತಿರುವ ತಾರತಮ್ಯದ ವಿರುದ್ಧ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ರೈತರು ಅಸಮಾಧಾನ ವ್ಯಕ್ತಪಡಿಸಿ ಶುಕ್ರವಾರ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಿದರು. ಕರ್ನಾಟಕ ಪ್ರಾಂತ ರೈತ ಸಂಘದ ನಾಯತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ರೈತರು ಗ್ರೇಡ್–2 ತಹಶೀಲ್ದಾರ್ ಎಂ.ಎನ್‌. ಮಠದ ಅವರಿಗೆ ಮನವಿ ಸಲ್ಲಿಸಿದರು.

ರೈತ ಮುಖಂಡ ಫಕ್ರಸಾಬ ನದಾಫ ಮಾತನಾಡಿ, “ಸವದತ್ತಿ ತಾಲೂಕಿನಾದ್ಯಂತ 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಗೋವಿನ ಜೋಳ ಬೆಳೆದಿದೆ. ಕೇಂದ್ರ ಸರ್ಕಾರ ಬೆಂಬಲ ಬೆಲೆ ₹2,410 ನಿಗದಿ ಮಾಡಿದ್ದರೂ ಮಾರುಕಟ್ಟೆಯಲ್ಲಿ ಕೇವಲ ₹1,700 ಮಾತ್ರ ದೊರೆಯುತ್ತಿದೆ. 5 ಕೆ.ಜಿ ಬೀಜದ ದರವೇ ₹2,500 ಆಗಿರುವ ಪರಿಸ್ಥಿತಿಯಲ್ಲಿ ರೈತರು ನಷ್ಟಕ್ಕೆ ತುತ್ತಾಗುತ್ತಿದ್ದಾರೆ,” ಎಂದು ಆರೋಪಿಸಿದರು.
ಅವರು ಮುಂದುವರಿಸಿ, “ಖರೀದಿ ಕೇಂದ್ರ ಆರಂಭಿಸುವುದಾಗಿ ಭರವಸೆ ನೀಡಿದರೂ ಹೆಸರು ಹಾಗೂ ಜೋಳ ಖರೀದಿ ಇನ್ನೂ ಆರಂಭವಾಗಿಲ್ಲ. ನೋಂದಣಿ ನಡೆದಿದ್ದರೂ ರೈತರಿಗೆ ಯಾವುದೇ ನೆರವು ಸಿಕ್ಕಿಲ್ಲ,” ಎಂದು ಹೇಳಿದರು.

ಚಿಕ್ಕುಂಬಿ ಗ್ರಾಮದ ರೈತ ನಾಯಕ ಈರಪ್ಪ ಪಾಟೀಲ ಮಾತನಾಡಿ, “ಜಿಪಿಎಸ್ ಮಾಡಿಸಿದವರ ಹೆಸರಿನಷ್ಟೇ ಖರೀದಿ ಆಗಿದೆ. ಪ್ರತಿ ಎಕರೆಗೆ 3 ಕ್ವಿಂಟಲ್ ಖರೀದಿಸಬೇಕಾದರೂ ಹೆಚ್ಚಿನ ಜಮೀನು ಹೊಂದಿದ ರೈತರ ಉತ್ಪಾದನೆ ಖರೀದಿಯಾಗಿಲ್ಲ. ಉತ್ತಮ ಕಾಳು ತೋರಿಸಿದರೂ ‘ಡ್ಯಾಮೇಜ್’ ಎಂದು ಹೇಳಿ ಕಡಿಮೆ ದರ ನೀಡಲಾಗುತ್ತಿದೆ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರು “ಗೋವಿನ ಜೋಳ, ಹೆಸರು ಖರೀದಿ ಮಾಡದ ಸರ್ಕಾರಕ್ಕೆ ಧಿಕ್ಕಾರ” ಎಂದು ಘೋಷಣೆ ಕೂಗಿದರು.
ಶ್ರೀಕಾಂತ ಹಟ್ಟಿಹೊಳಿ, ಬಸವರಾಜ ಕಪ್ಪನ್ನವರ, ನಾಗಪ್ಪ ಪ್ರಭುನವರ, ಶಂಕರ ಬೆಡಸೂರ, ಮೌನೇಶ ನಾಯ್ಕರ, ನಿಂಗನಗೌಡ ಸಂಗನಗೌಡ್ರ, ಎಂ.ಎಸ್. ಹಂಜಿಬುಟ್ಟಿ, ಕಲ್ಲನಗೌಡ ಸುಳ್ಳದ, ಕೆ.ಎಂ. ಹೊನ್ನಪ್ಪನವರ ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...