ಬೆಳಗಾವಿ | ಗೊಬ್ಬರವನ್ನು ರೈತರಿಗೆ ವಿತರಿಸದೇ ಸ್ವತಃ ಅಧಿಕಾರಿಗಳೇ ಕಳ್ಳತನ ಮಾಡಿದ್ದಾರೆ ರೈತರ ಆರೋಪ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿರಿಸಿದ ಗೊಬ್ಬರವನ್ನು ರೈತರಿಗೆ ವಿತರಿಸದೇ ಸ್ವತಃ ಅಧಿಕಾರಿಗಳೇ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ಸದಸ್ಯರು ತೋಟಗಾರಿಕೆ ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಿದರು.

ಈ ಸಂದರ್ಭದಲ್ಲಿ ರೈತ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷರಾದ ಸುರೇಶ ಸಂಪಗಾವಿ ಮಾತನಾಡಿ, ‘ತಲಾ ₹ 4,500 ಬೆಲೆಯ 250 ಗೊಬ್ಬರದ ಚೀಲಗಳನ್ನು ಅವಶ್ಯವಿರುವ ರೈತರಿಗೆ ನಿಡದೇ ಅಧಿಕಾರಿಗಳೇ ಕಳವು ಮಾಡಿದ್ದಾರೆ ಶುಕ್ರವಾರ ಸಂಜೆಯವರೆಗೂ ರೈತರು ಕಚೇರಿಯಲ್ಲಿದ್ದರು. ಕಚೇರಿ ಸಮಯ ಮುಗಿಯುವವರೆಗೂ ನಿಂತರೂ ಗೊಬ್ಬರ ವಿತರಿಸಿಲ್ಲ. ಶನಿವಾರ ಮತ್ತು ಭಾನುವಾರ ರಜೆ ಇದ್ದಾಗ ಕಳವು ಮಾಡಿದ್ದಾರೆ ಗೊಬ್ಬರ ಪಡೆದ ರೈತರ ವಿವರ ನೀಡಿರಿ ಎಂದರೆ ನೀಡುತ್ತಿಲ್ಲ. ಉತ್ತರಿಸಬೇಕಾದವರು ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಕೆಲವರು ಸಭೆಯ ನೆಪ ಹೇಳಿ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ. ಮಾರ್ಚ್‌ನಲ್ಲಿ ನೀಡಬೇಕಾದುದನ್ನು ಮಳೆಗಾಲ ಆರಂಭವಾದರೂ ಕೊಡುತ್ತಿಲ್ಲ. ಅದನ್ನೇ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ಬಂದ್ ಮಾಡಿ ಹೋರಾಟ ತೀವ್ರಗೊಳಿಸಲು ರೈತರು ಮುಂದಾದರು. ಪೊಲೀಸಲು ರೈತರ ಮನವೊಲಿಸಿ ಪ್ರತಿಭಟನೆ ನಿಲ್ಲಿಸಲು ಯಶಸ್ವಿಯಾದರು. ನಂತರ ಶಿರಸ್ತೇದಾರ ಶಶಿರಾಜ ವನಕೆ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವರಾಜ ಮೊಖಾಶಿ, ಮಹಾಂತೇಶ ಕಮತ, ಬೀರಪ್ಪ ದೇಶನೂರ, ಮಹಾಂತೇಶ ಮುತವಾಡ, ಸಮರ್ಥ ಪಾಟೀಲ, ರಾಮನಗೌಡ ಪಾಟೀಲ, ಶಿವಪ್ಪ ಹೊರಟ್ಟಿ, ಹನಮಂತ ದನದಮನಿ, ಮೂಗಬಸಪ್ಪ ಕರೀಕಟ್ಟಿ, ಮಲ್ಲಿಕಾರ್ಜುನ ಹಂಚಿನಾಳ, ಸಿದ್ದಪ್ಪ ಕರಡಿ, ರಾಮಲಿಂಗಪ್ಪ ದನದಮನಿ, ಗುರುನಾಥ ಕರೀಕಟ್ಟಿ, ಜೆ.ವಿ. ಅಗಡಿ, ಸಿದ್ದಪ್ಪ ಪಟ್ಟದಕಲ್ಲ ಇತರರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...