ಬೆಳಗಾವಿ | ಪ್ಲಾಸ್ಟಿಕ್ ಅಂಗಡಿಗೆ ಬೆಂಕಿ ಅಪಾರ ನಷ್ಟ

Date:

ಬೆಳಗಾವಿ ನಗರದ ಪ್ರಮುಖವಾದ ಮಾರುಕಟ್ಟೆ ಪ್ರದೇಶವಾಗಿರುವ ರವಿವಾರ ಪೇಟೆಯಲ್ಲಿರುವ ಪ್ಲಾಸ್ಟಿಕ್ ಅಂಗಡಿಗೆ ಬೆಳಗಿನ ಜಾವ 3.30ರ ಆಸುಪಾಸು ಬೆಂಕಿ ಅವಘಡ ಸಂಭವಿಸಿದೆ. ಇದರಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ.

ರವಿವಾರ ಪೇಟೆಯ ಕಾಂದಾ ಮಾರ್ಕೆಟ್ ನಲ್ಲಿಯ ಪ್ಲಾಸ್ಟಿಕ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿದ್ದರಿಂದ ಅಪಾರ ಪ್ರಮಾಣ ಹಾನಿ ಸಂಭವಿಸಿದೆ. ಪ್ಲಾಸ್ಟಿಕ್ ಅಂಗಡಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆಯೋ ಇಲ್ಲವೇ ಬೇರೆ ಕಾರಣಕ್ಕೆ ಬೆಂಕಿ ತಗುಲಿದೆಯೋ ಎಂಬುದರ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಅಷ್ಟರೊಳಗೆ ಇಡೀ ಅಂಗಡಿ ಸುಟ್ಟು ಕರಕಲಾಗಿತ್ತು. ಕಾಂದಾ ಮಾರ್ಕೆಟ್ ನಲ್ಲಿರುವ ಪೃಥ್ವಿ ನಾಲ್ವಡಿ ಎಂಬವರಿಗೆ ಸೇರಿದ ಪ್ಲಾಸ್ಟಿಕ್‌ ಅಂಗಡಿ ಇದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...