ಬೆಳಗಾವಿ : ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜರ ವಿರುದ್ಧ ನಕಲಿ ದಾಖಲೆ ಆರೋಪ – ಡಿವಿಪಿ ಕ್ರಮಕ್ಕೆ ಆಗ್ರಹ

Date:

ಬೆಳಗಾವಿಯ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿವಿಪಿ ಸಂಸ್ಥಾಪಕ-ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ, ತ್ಯಾಗರಾಜರು 2007ರಲ್ಲಿ ಉಪನ್ಯಾಸಕರ ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರೂ ನಂತರ ಪ್ರಾಧ್ಯಾಪಕರಾಗಿ ಹಾಗೂ ಕುಲಪತಿಯಾಗಿ ನೇಮಕಗೊಂಡಿರುವುದು ಕಾನೂನುಬಾಹಿರ ಎಂದರು. ಈಗಾಗಲೇ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇದ್ದು, ಎಂ.ಬಿ.ಎ ಪದವಿ ಪ್ರಮಾಣ ಪತ್ರದ ಸತ್ಯಾಸತ್ಯತೆ ಕುರಿತು ತನಿಖೆ ನಡೆಯುತ್ತಿದೆ ಎಂದರು.

2013ರಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾಗ ಕೋಟ್ಯಂತರ ರೂಪಾಯಿ ಅವ್ಯವಹಾರದ ಆರೋಪವೂ ಇದೆ ಎಂದು ಪೂಜಾರಿ ತಿಳಿಸಿದರು. “ಸರ್ಕಾರ ತಕ್ಷಣ ತ್ಯಾಗರಾಜರನ್ನು ಅಮಾನತು ಮಾಡಿ ಕ್ರಮ ಕೈಗೊಳ್ಳದಿದ್ದರೆ ಡಿವಿಪಿ ದೊಡ್ಡ ಮಟ್ಟದ ಹೋರಾಟ ಕೈಗೊಳ್ಳಲಿದೆ” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಡಿವಿಪಿ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಜಿಲ್ಲಾ ಸಂಚಾಲಕ ಆದರ್ಶ ಗಸ್ತಿ, ಸಹ ಸಂಚಾಲಕ ಸುದೀಪ್ ಐಹೊಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...