ಬೆಳಗಾವಿ | ಮೈಕ್ರೋಫೈನಾನ್ಸ್ ಸಾಲ ವಂಚನೆ ನಾಲ್ವರ ಬಂಧನ

Date:

ಬೆಳಗಾವಿ ಜಿಲ್ಲೆಯಲ್ಲಿ ನಡೆದ ಬೃಹತ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂದಿಸಿದಂತೆ ಯಮನಾಪುರ, ಹಾಲ್ಭಾವಿ, ಕಂಗ್ರಾಲಿ ಕೆಎಚ್ ಮತ್ತು ಕಂಗ್ರಾಲಿ ಬಿಕೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಈ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಮೈಕ್ರೋಫೈನಾನ್ಸ್ ಸಾಲ ಮಂಜೂರಾತಿ ನೆಪದಲ್ಲಿ ಮಹಿಳೆಯರು ಸೇರಿದಂತೆ ಸುಮಾರು 7,700 ಕ್ಕೂ ಹೆಚ್ಚು ವ್ಯಕ್ತಿಗಳು ಒಟ್ಟು 19.35 ಕೋಟಿ ರೂ.ಗಳಷ್ಟು ಹಣ ಕಳೆದುಕೊಂಡಿದ್ದಾರೆ.

ಆರೋಪಿಗಳನ್ನು ಅಶ್ವಿನಿ ಹೊಳೆಪ್ಪ ದಡ್ಡಿ, ಹೊಳೆಪ್ಪ ಫಕೀರಪ್ಪ ದಡ್ಡಿ, ಶೇವಂತಿ ಹೊಳೆಪ್ಪ ದಡ್ಡಿ ಮತ್ತು ಪ್ರಿಯಾಂಕಾ ಹೊಳೆಪ್ಪ ದಡ್ಡಿ ಎಂದು ಗುರುತಿಸಲಾಗಿದೆ, ಇವರೆಲ್ಲರೂ ಬೆಳಗಾವಿ ತಾಲ್ಲೂಕಿನ ಯಮನಾಪುರ ನಿವಾಸಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿ ತಾಲ್ಲೂಕಿನಲ್ಲಿ ಆರಂಭವಾದ ಈ ಹಗರಣವು ಜಿಲ್ಲೆಯಾದ್ಯಂತ ಮತ್ತು ಕರ್ನಾಟಕದ ಇತರ ಭಾಗಗಳಿಗೆ ಹರಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋನಟ್ಟಿ ಗ್ರಾಮದ ನಿವಾಸಿ ಶೇಖಾ ಕಣ್ಣಪ್ಪ ಹಂಚಿನ್ಮನಿ ಎಂಬವರು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ನಂತರ ವಂಚನೆ ಪ್ರಕರಮ ಬೆಳಕಿಗೆ ಬಂದಿದೆ.

ಯಮನಾಪುರದ ನಾಲ್ವರು ವ್ಯಕ್ತಿಗಳು ಸಬ್ಸಿಡಿ ಸಾಲಗಳನ್ನು ನೀಡುವುದಾಗಿ ಭರವಸೆ ನೀಡುವ ಮೂಲಕ ಈ ಯೋಜನೆಯನ್ನು ರೂಪಿಸಿದ್ದರು. ಸಾಲ ನೀಡಿದ ನಂತರ, ಶೇ. 60 ರಷ್ಟು ಹಣವನ್ನು ತೆಗೆದುಕೊಳ್ಳಲಾಗುವುದು ಮತ್ತು ಉಳಿದ ಶೇ. 40% ರಷ್ಟು ಹಣವನ್ನು ಸಾಲಗಾರರಿಗೆ ಸಬ್ಸಿಡಿಯಾಗಿ ನೀಡಲಾಗುವುದು ಎಂದು ಹೇಳಿಕೊಂಡು ಅವರು ಜನರನ್ನು ಆಕರ್ಷಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...