ಸಾರ್ವಜನಿಕರಿಗೆ ಹಣವನ್ನು ಎರಡು ಪಟ್ಟು, ಮಾಡಿಕೊಡುವುದಾಗಿ ಆಮಿಷವೊಡ್ಡಿ ವಂಚಿಸುತ್ತಿದ್ದ ಅಂತರರಾಜ್ಯ ವಂಚಕರ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಮಹಾರಾಷ್ಟ್ರದ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು ಏಳು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್‌ಪಿ) ಕೆ. ರಾಮರಾಜನ್ ತಿಳಿಸಿದ್ದಾರೆ.
ಗೋಕಾಕ ತಾಲೂಕಿನ ಶ್ರೀನಗರದಲ್ಲಿರುವ ಮನೆಯೊಂದರಲ್ಲಿ ಹಣವನ್ನು ನಾಲ್ಕು ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ವಂಚನೆ ನಡೆಸುತ್ತಿದ್ದ ಜಾಲದ ಮೇಲೆ ಗೋಕಾಕ ನಗರ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು.
ಬಂಧಿತರನ್ನು ಪರಶುರಾಮ ಭೀಮಶಿ ಬಡಕರಿ, ಇಮ್ರಾನ್ ಬಾಬಾಜಾನ್ ಜುನೇದಿ, ಜಯಶ್ರೀ ಬಾಬು ಕಾಂಬಳೆ, ಮನೀಷಾ ರಾಜು ಗಾಯಕವಾಡ (ಮಾರ್ಗರೆಟ್ ಡೇವಿಡ್ ಗಾಯಕವಾಡ), ಉಜ್ವಲಾ ತುಳಸಿರಾಮ ಬಿಲಾನೆ ಹಾಗೂ ಮಹಾರಾಷ್ಟ್ರ ಪೊಲೀಸ್ ಇಲಾಖೆಯ ಸಿಬ್ಬಂದಿಯಾದ ಅನಂತ ಪ್ರಕಾಶ ನರವಾಡೆ ಮತ್ತು ದಿಲ್ದಾರ್ ರಬ್ಬಾನಿ ಶೇಖ ಎಂದು ಗುರುತಿಸಲಾಗಿದೆ.




