ಬೆಳಗಾವಿ : ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳು ಬಂಧನ

Date:

ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಏಳನೇ ತರಗತಿ ವಿದ್ಯಾರ್ಥಿನಿಗೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನವೆಂಬರ್ 23ರಂದು ಮನೆಯಿಂದ ಹಿಟ್ಟಿನ ಗಿರಣಿಗೆ ತೆರಳುತ್ತಿದ್ದ ಬಾಲಕಿಯನ್ನು ಇಬ್ಬರು ಯುವಕರು ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ದೌರ್ಜನ್ಯ ಎಸಗಿದ್ದಾರೆ. ಮನೆಯಲ್ಲಿ ಪೋಷಕರಿಗೆ ವಿಷಯ ತಿಳಿಸಿದ ನಂತರ ಪ್ರಕರಣ ಹೊರಬಿದ್ದಿದ್ದು, ಪೊಲೀಸರು ತಕ್ಷಣ ದೂರು ದಾಖಲಿಸಿದ್ದಾರೆ.

ಆರೋಪಿಗಳಾದ ಮಣಿಕಂಠ ದಿನ್ನಿಮನಿ ಹಾಗೂ ಈರಣ್ಣ ಸಂಕಮ್ಮನವರ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಜೀವ ಬೆದರಿಕೆ ಹಾಕಿದ್ದರು ಎಂಬುದೂ ದೂರಿನಲ್ಲಿ ಉಲ್ಲೇಖಗೊಂಡಿದ್ದು, ಪ್ರಕರಣವನ್ನು ಪೋಕ್ಸೋ ಕಾಯ್ದೆಯಡಿ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಕುರಿತು ಪ್ರತಿಕ್ರಿಯಿಸಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್, “ಸಂತ್ರಸ್ತ ಬಾಲಕಿ ರಕ್ಷಣೆಗಾಗಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಗತ್ಯವಿದ್ದರೆ ಕುಟುಂಬಕ್ಕೆ ಹೆಚ್ಚುವರಿ ಭದ್ರತೆ ಒದಗಿಸಲಾಗುತ್ತದೆ,” ಎಂದು ತಿಳಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...