ಬೆಳಗಾವಿ | ದೇವರೆ ನನ್ನ ಅತ್ತೆ ಸಾಯಲಿ ದೇವಸ್ಥಾನ ಹುಂಡಿಯಲ್ಲಿ ವಿಚಿತ್ರ ಹರಕೆಯ ಚೀಟಿ

Date:

ಬೆಳಗಾವಿ ಜಿಲ್ಲೆಯ ಮುಗಳಖೋಡ ಪಟ್ಟಣ ಸಮೀಪದ ಖಣದಾಳ ಗ್ರಾಮದ ಹುಲಿಕಾಂತೇಶ್ವರ ದೇವಸ್ಥಾನದ ಹುಂಡಿಯಲ್ಲಿ ವಿಚಿತ್ರ ಹರಕೆಯ ಚೀಟಿಯೊಂದು ಪತ್ತೆಯಾಗಿ ಗ್ರಾಮಸ್ಥರಲ್ಲಿ ಚರ್ಚೆಗೆ ಕಾರಣವಾಗಿದೆ.

ಫೆಬ್ರವರಿ 13ರಿಂದ 17ರವರೆಗೆ ಜರುಗಿದ ಹುಲಿಕಾಂತೇಶ್ವರ ಜಾತ್ರೆಯ ನಂತರ ದೇವಸ್ಥಾನ ಸಮಿತಿಯವರು ಹುಂಡಿ ಎಣಿಕೆ ನಡೆಸಿದರು. ಈ ವೇಳೆ ಬಿಳಿ ಹಾಳೆಯ ಮೇಲೆ ದೇವರೇ, ಮುಂದಿನ ಜಾತ್ರೆ ಬರುವಷ್ಟರಲ್ಲಿ ನನ್ನ ಅತ್ತೆ ಸಾಯಲಿ ಎಂದು ಬರೆಯಲಾಗಿದ್ದ ಚೀಟಿ ಸಿಕ್ಕಿದೆ. ಅದಕ್ಕೆ ₹100ರ ನೋಟನ್ನು ಅಂಟಿಸಿ ಹುಂಡಿಗೆ ಹಾಕಲಾಗಿತ್ತು.

ದೇವಸ್ಥಾನ ಸಮಿತಿ ಅಧ್ಯಕ್ಷ ರಾಮಕೃಷ್ಣ ದಳವಾಯಿ ಮಾತನಾಡಿ, ಎರಡು ಚೀಟಿಗಳು ಸಿಕ್ಕಿವೆ. ಒಂದರಲ್ಲಿ ‘ದೇವರೆ ನನ್ನ ಕಷ್ಟಗಳನ್ನು ದೂರ ಮಾಡು’ ಎಂಬ ಬೇಡಿಕೆ ಇದೆ. ಇನ್ನೊಂದರಲ್ಲಿ ‘ಅತ್ತೆ ಸಾಯಲಿ’ ಎಂಬ ಬೇಡಿಕೆ ಇದೆ. ಇದನ್ನು ಯಾರು ಬರೆದಿದ್ದಾರೆ ಎಂಬುದು ಗೊತ್ತಿಲ್ಲ. ಇದೇ ಮೊದಲ ಬಾರಿಗೆ ಇಂತಹ ವಿಚಿತ್ರ ಮನಸ್ಥಿತಿಯ ಚೀಟಿ ಪತ್ತೆಯಾಗಿದೆ, ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಶಾಲೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಈ ಘಟನೆ ಗ್ರಾಮದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಭಕ್ತರು ಸದ್ಭಾವನೆಯ ಹರಕೆಗಳನ್ನು ಸಲ್ಲಿಸಬೇಕು ಎಂದು ದೇವಸ್ಥಾನ ಸಮಿತಿ ಮನವಿ ಮಾಡಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...