ಬೆಳಗಾವಿ | ಗೋಕಾಕ ನಗರಸಭೆ: ₹4.95 ಲಕ್ಷ ಉಳಿತಾಯದ ಬಜೆಟ್ ಮಂಡನೆ

Date:

ಬೆಳಗಾವಿ ಜಿಲ್ಲೆಯ ಗೋಕಾಕ ನಗರಸಭೆಯ 2024-25ನೇ ಸಾಲಿನ ಪರಿಷ್ಕೃತ ಆಯವ್ಯಯ ಹಾಗೂ 2025-26ನೇ ಸಾಲಿನ ಬಜೆಟ್‌ ಅನ್ನು ಪೌರಾಯುಕ್ತ ಆರ್.ಪಿ. ಜಾಧವ ಅವರು ಮಂಡಿಸಿದರು. ಈ ಬಾರಿ ₹4.95 ಲಕ್ಷ ಉಳಿತಾಯದ ಬಜೆಟ್‌ ಅನ್ನು ಮಂಡಿಸಲಾಗಿದ್ದು, ಒಟ್ಟಾರೆ ₹67.42 ಕೋಟಿ ಆದಾಯ ಮತ್ತು ₹67.37 ಕೋಟಿ ವೆಚ್ಚ ಅಂದಾಜು ಮಾಡಲಾಗಿದೆ.

ನಗರ ಅಭಿವೃದ್ಧಿಗೆ ₹4.30 ಕೋಟಿ ಅನುದಾನ

15ನೇ ಹಣಕಾಸು ಆಯೋಗ ಮತ್ತು ರಾಜ್ಯ ಹಣಕಾಸು ಆಯೋಗದಿಂದ ಬಿಡುಗಡೆಯಾಗಬಹುದಾದ ₹4.30 ಕೋಟಿ ಅನುದಾನದಲ್ಲಿ ಹೊಸ ರಸ್ತೆ, ಚರಂಡಿ, ಉದ್ಯಾನ ಹಾಗೂ ನೀರು ಪೂರೈಕೆ ವ್ಯವಸ್ಥೆ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ.

ಲಕ್ಷ್ಮಿದೇವಿ ಜಾತ್ರೆ: ₹30 ಕೋಟಿ ಅನುದಾನ ನಿರೀಕ್ಷೆ

ಎಸ್.ಎಫ್.ಸಿ. ವಿಶೇಷ ಅನುದಾನದಲ್ಲಿ ಲಕ್ಷ್ಮಿದೇವಿ ಜಾತ್ರೆ ಅಂಗವಾಗಿ ₹30 ಕೋಟಿ ಅನುದಾನ ನಿರೀಕ್ಷಿಸಲಾಗಿದೆ. ಇದನ್ನು ರಸ್ತೆ, ಚರಂಡಿ, ವಿದ್ಯುತ್, ಶೌಚಾಲಯ ಹಾಗೂ ಇತರೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಬಳಸಲು ಯೋಜಿಸಲಾಗಿದೆ.

ವಾಣಿಜ್ಯ ಮಳಿಗೆಗಳ ಕಾಮಗಾರಿ ಪೂರ್ಣ

ನಗರದಲ್ಲಿ ₹2.50 ಕೋಟಿ ವೆಚ್ಚದಲ್ಲಿ ನೂತನ ವಾಣಿಜ್ಯ ಮಳಿಗೆಗಳ ಕಾಮಗಾರಿ ಮುಕ್ತಾಯಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಪತ್ತು ಹೆಚ್ಚಿಸಲು ಕ್ರಮ

ನಗರಸಭೆ ಸಂಪತ್ತನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ನಿಯಂತ್ರಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಪೌರಾಯುಕ್ತರು ತಿಳಿಸಿದರು.

ಸಭೆಯಲ್ಲಿ ಅಧ್ಯಕ್ಷ ಪ್ರಕಾಶ ಮುರಾರಿ, ಉಪಾಧ್ಯಕ್ಷೆ ಬಿ.ಎ. ಜಮಾದಾರ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶೈಲ ಯಕ್ಕುಂಡಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿ.ವೈ. ಪಾಟೀಲ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಂ.ಎಚ್. ಗಜಾಕೋಶ ಸೇರಿದಂತೆ ನಗರಸಭೆ ಸದಸ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...