ಬೆಳಗಾವಿ : ಚಿನ್ನದ ಸರ ವಂಚನೆ ಪ್ರಕರಣ – ಆರೋಪಿಯ ಬಂಧನ

Date:

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಿಡಕಲ್ ಗ್ರಾಮದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ವಂಚನೆಗೆ ಒಳಗಾಗಿರುವ ಘಟನೆ ನಡೆದಿದೆ. ಹಣ ಜಮೆ ಮಾಡಿಕೊಡುವ ನೆಪದಲ್ಲಿ ಪುಸಲಾಯಿಸಿದ ಆರೋಪಿ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದನು.

ಹಿಡಕಲ್ ಗ್ರಾಮದ ರುಕ್ಷ್ಮವ್ವ ಕಾಂಬಳೆ ಎಂಬುವವರ ಬ್ಯಾಂಕ್ ಖಾತೆಗೆ ₹40,000 ಹಣ ಜಮೆಯಾಗಿದೆ ಎಂದು ತಿಳಿಸಿ, ಅದನ್ನು ಅಳಗವಾಡಿ ಬ್ಯಾಂಕ್‌ನಲ್ಲಿ ವಿತ್‌ಡ್ರಾ ಮಾಡಿಕೊಡುತ್ತೇನೆ ಎಂದು ಹೇಳಿ ಮಹಿಳೆಯನ್ನು ಹಿಡಕಲ್ ಹೊರವಲಯಕ್ಕೆ ಕರೆದುಕೊಂಡು ಹೋಗಿದ್ದ. ನಂತರ “ಕೊರಳಲ್ಲಿ ಚಿನ್ನದ ಸರ ಇದ್ದರೆ ಬ್ಯಾಂಕ್ ಹಣ ಬಿಡುಗಡೆ ಮಾಡುವುದಿಲ್ಲ” ಎಂದು ನಂಬಿಸಿ, ಬೊರಮಾಳ ಸರ ಎಗರಿಸಿ ಪರಾರಿಯಾಗಿದ್ದ.

ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣೆಯ ಸಿಪಿಐ ರತನ್ ಕುಮಾರ್ ಜೀರಗ್ಯಾಳ, ಪಿಎಸ್‌ಐ ಮಾಳಪ್ಪ ಪೂಜಾರಿ, ಅಪರಾಧ ವಿಭಾಗದ ಪಿಎಸ್‌ಐ ಶಿವಾನಂದ ಕಾರಜೋಳ ಹಾಗೂ ಸಿಬ್ಬಂದಿ ತಂಡವು ಕೋಲ್ಹಾಪುರ ಮೂಲದ ದಸ್ತಗೀರ ಶೇಖ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರ ತನಿಖೆ ವೇಳೆ, ದಸ್ತಗೀರ ಶೇಖ್ ಈ ಹಿಂದೆ ಎಂಟು ಕಡೆಗಳಲ್ಲಿ ವಂಚನೆ ಮಾಡಿದಿರುವುದು ಬೆಳಕಿಗೆ ಬಂದಿದೆ. ಈವರೆಗೂ ಹಲವಾರು ಪ್ರಕರಣಗಳಲ್ಲಿ ಆರೋಪಿ ಪಾಲ್ಗೊಂಡಿದ್ದು, ಮೀರಜ್ ಮಾರ್ಗದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಚಿನ್ನದ ತಾಳಿ ಕಳುವಾದ ಪ್ರಕರಣವೂ ಆರೋಪಿಗೆ ಸಂಬಂಧಿಸಿದ್ದಾಗಿದೆ.

ಈ ಸುದ್ದಿ ಓದಿದ್ದಿರಾ?.ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡ ದೇವಸ್ಥಾನ ಹುಂಡಿಯಲ್ಲಿ ₹1.4 ಕೋಟಿ ಕಾಣಿಕೆ ಸಂಗ್ರಹ

ಈ ಪ್ರಕರಣದಲ್ಲಿ ಚಿಕ್ಕೋಡಿ ಮೂಲದ ಕುಶಪ್ಪ ತಳವಾರ ಎಂಬ ಮತ್ತೊಬ್ಬ ಆರೋಪಿಯನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...