ಬಸ್ ಹತ್ತುವ ಸಂದರ್ಭದಲ್ಲಿ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಚಿನ್ನಾಭರಣ ಕಳವು ಮಾಡಿದ ಪ್ರಕರಣವನ್ನು ಬೆಳಗಾವಿ ನಗರದ ಕ್ಯಾಂಪ್ ಪೊಲೀಸ್ ಠಾಣೆ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿ ₹3.64 ಲಕ್ಷ ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ನಿಪ್ಪಾಣಿ ನಗರದ ಬುದ್ಧನಗರ ನಿವಾಸಿ ಸವಿತಾ ಸಂಜು ಲೋಂಡೆ (46) ಎಂದು ಗುರುತಿಸಲಾಗಿದೆ. ಬೆಳಗಾವಿಯ ನಿರ್ಮಲಾ ಮಿಲಿಂದ ಸಾವಂತ ಅವರು ಮಾರ್ಚ್ 4ರಂದು ಬಸ್ ಹತ್ತುವ ವೇಳೆ ತಮ್ಮ ಬ್ಯಾಗಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳುವಾಗಿರುವ ಕುರಿತು ಕ್ಯಾಂಪ್ ಠಾಣೆಗೆ ದೂರು ನೀಡಿದ್ದರು.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದರು. ಖಡೇಬಜಾರ್ ಎಸಿಪಿ ಶೇಖರಪ್ಪ ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಆನಂದ ಎಂ. ಒನಕುದ್ರೆ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸಲಾಯಿತು.
ಪಿಎಸ್‌ಐಗಳಾದ ಆರ್.ಐ. ಸನದಿ ಹಾಗೂ ಎ. ರುಕ್ಕಿಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ, ಆಕೆಯ ಬಳಿಯಿಂದ ₹3.64 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸುದ್ದಿ ಓದಿದ್ದಿರಾ ? ರಾಜ್ಯ ಬಜೆಟ್ | ಬೆಳಗಾವಿ ಜಿಲ್ಲೆಗೆ ಸಿಕ್ಕಿದ್ದೇನು ?
ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ




