ಸರ್ಕಾರಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರೇಬಾಗೇವಾಡಿ ಬಸವನಗರದ ಬಳಿ ಇರುವ ಬೆಳಗಾವಿ ಹಿರೇಬಾಗೇವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ.
ಖಾನಾಪೂರ ತಾಲೂಕಿನ ಅವರೊಳ್ಳಿ ಗ್ರಾಮದ ರಾಜಗೌಡ ಕಲ್ಲನಗೌಡ ಪಾಟೀಲ (45) ಮೃತ ವ್ಯಕ್ತಿ. ಅಪಘಾತ ಸಂಭವಿಸಿದ ವೇಳೆ ಬೈಕ್‌ನ ಹಿಂಬದಿ ಕುಳಿತಿದ್ದ ಅವರ ಪತ್ನಿ ಸುನಿತಾ ಪಾಟೀಲ ಅವರಿಗೆ ಸಾಧಾರಣ ಗಾಯಗಳಾಗಿವೆ.
ಗಾಯಗೊಂಡ ಸುನಿತಾ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.




