ಬೆಳಗಾವಿ : ವಿದ್ಯುತ್ ತಗುಲಿ ಹೆಸ್ಕಾಂ ಸಿಬ್ಬಂದಿ ಸಾವು

Date:

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಹೆಸ್ಕಾಂ ಸಿಬ್ಬಂದಿಗೆ ವಿದ್ಯುತ್ ತಗುಲಿ ಸಾವನ್ನಪ್ಪಿರುವ ಘಟನೆ ನಡೆದಿದೆ

ಬಗರನಾಳ ಗ್ರಾಮದ ನಿವಾಸಿ ಮಾರುತಿ ಅವಲಿ (25), ಮುಗಳಿಹಾಳ ಗ್ರಾಮದಲ್ಲಿ ವಿದ್ಯುತ್ ಕಂಬದ ಮೇಲೆ ಹತ್ತಿ ಕಾಮಗಾರಿ ನಡೆಸುತ್ತಿದ್ದ ವೇಳೆ ಅಕಸ್ಮಾತ್ತಾಗಿ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುರ್ತಿನಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸದ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂಬುದು ಸ್ಥಳೀಯರ ಆರೋಪ.

ದುರ್ಘಟನೆ ನಂತರ ಮೂರು ಗಂಟೆಗಳ ಕಾಲ ಮೃತದೇಹ ವಿದ್ಯುತ್ ಕಂಬದ ಮೇಲೆ ಜೋತಾಡಿದ್ದರೂ, ಸಂಬಂಧಿತ ಹೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಬಾರದೇ ನಿರ್ಲಕ್ಷ್ಯ ತೋರಿದ್ದರಿಂದ ಗ್ರಾಮಸ್ಥರು ಕೋಪಗೊಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಒಬ್ಬ ಯುವ ಉದ್ಯೋಗಿ ಜೀವ ಹೋದರೂ ಅಧಿಕಾರಿಗಳಲ್ಲಿ ಮಾನವೀಯತೆ ಕಾಣಿಸುತ್ತಿಲ್ಲ,” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...