ಬೆಳಗಾವಿ | ಮಹಿಳಾ ಅಧಿಕಾರಿಯ ಮನೆಗೆ ಗುಪ್ತ ಕ್ಯಾಮರಾ: ಕೋಟಿ ರೂಪಾಯಿ ಬೇಡಿಕೆ ಮೂವರ ಬಂಧನ

Date:

ಸರ್ಕಾರಿ ಮಹಿಳಾ ಅಧಿಕಾರಿಯ ಮನೆಯೊಳಗೆ ರಹಸ್ಯ ಕ್ಯಾಮರಾ ಅಳವಡಿಸಿ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿ, ಅವುಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿ ಕೋಟಿ ರೂಪಾಯಿಗಳ ಬ್ಲ್ಯಾಕ್‌ಮೇಲ್ ನಡೆಸುತ್ತಿದ್ದ ನಕಲಿ ಯೂಟೂಬರ್ಸ್‌ಗಳ ಜಾಲವನ್ನು ಬೆಳಗಾವಿ ನಗರದ ಮಾಳಮಾರುತಿ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ನಗರವನ್ನೇ ಬೆಚ್ಚಿಬೀಳಿಸುವ ವಿಕೃತ ಕೃತ್ಯ ಬೆಳಕಿಗೆ ಬಂದಿದೆ.

ಬಂಧಿತರನ್ನು ಸಮೀ‌ರ್ ನಿಸಾರ್ ಅಹ್ಮದ್ ಶೇಖ್ (32), ಅಬ್ದುಲ್‌ ರಶೀದ್‌ ಮಕಾನದಾರ (51) ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಎಂದು ಗುರುತಿಸಲಾಗಿದೆ. ಪತ್ರಕರ್ತರಂತೆ ವರ್ತಿಸುತ್ತಿದ್ದ ಆರೋಪಿಗಳು, ಯೂಟ್ಯೂಬ್ ಮತ್ತು ಸಾಮಾಜಿಕ ಜಾಲತಾಣಗಳನ್ನು ಮುಂಭಾಗವನ್ನಾಗಿ ಮಾಡಿಕೊಂಡು ಬ್ಲ್ಯಾಕ್‌ಮೇಲ್ ದಂಧೆ ನಡೆಸುತ್ತಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಮಹಿಳಾ ಅಧಿಕಾರಿಯ ಮನೆಯ ಕೊಠಡಿಯಲ್ಲಿ ಗುಪ್ತವಾಗಿ ಹಿಡನ್ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದ ಆರೋಪಿಗಳು, ಅವುಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿ ಒಂದು ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ ತಾತ್ಕಾಲಿಕವಾಗಿ 50 ಲಕ್ಷ ರೂ. ನೀಡುವಂತೆ ನಿರಂತರವಾಗಿ ಒತ್ತಡ ಹೇರುತ್ತಿದ್ದರು ಎನ್ನಲಾಗಿದೆ. ಪ್ರಕರಣ ದಾಖಲಿಸದಂತೆ ಪೊಲೀಸ್‌ ಅಧಿಕಾರಿಗಳ ಮೇಲೆ ಪರೋಕ್ಷ ಒತ್ತಡ ತರುವ ಪ್ರಯತ್ನವೂ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳಾ ಅಧಿಕಾರಿ ನೀಡಿದ ದೂರಿನ ಮೇರೆಗೆ, ಸಿಪಿಐ ಬಿ.ಆ‌ರ್. ಗಡೇಕ‌ರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಮಾಳಮಾರುತಿ ಪೊಲೀಸರು, ಸೂಕ್ತ ಸಾಕ್ಷ್ಯಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಯಾವುದೇ ಒತ್ತಡಕ್ಕೆ ಮಣಿಯದೆ ಪ್ರಕರಣವನ್ನು ಗಂಭೀರವಾಗಿ ಕೈಗೊಂಡ ಪೊಲೀಸರ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...