ಬೆಳಗಾವಿ | ವಿದ್ಯುತ್ ತಗುಲಿ ಪ್ರೌಢ ಶಾಲಾ ಶಿಕ್ಷಕ ಸಾವು

Date:

ಮನೆಯ ಗೇಟ್‌ ತೆಗೆಯುವ ವೇಳೆ ವಿದ್ಯುತ್‌ ತಗುಲಿ ಪ್ರೌಢ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸತ್ಯ ಪ್ರಮೋದ್‌ ನಗರದಲ್ಲಿ ನಡೆದಿದೆ.

ಪ್ರವೀಣ ಕುಮಾರ ಜಿ. ಕಡಪಟ್ಟಿಮಠ (41) ಮೃತ ದುರ್ದೈವಿ. ವಿವಾಹ ವಾರ್ಷಿಕೋತ್ಸವ ಹಿನ್ನಲೆಯಲ್ಲಿ ಪ್ರವಾಸ ಮುಗಿಸಿ ವಾಪಸ್ ಮನೆಗೆ ಬಂದ ಸಂದರ್ಭದಲ್ಲಿ ಗೇಟ್ ತಗೆಯಲು ಹೋದಾಗ ವಿದ್ಯುತ್‌ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೂಲತಃ ತೇರದಾಳ ಗ್ರಾಮದವರಾದ ಇವರು, ತಾಲೂಕಿನ ಸತ್ತಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರವೀಣ ಕುಮಾ‌ರ್ ದಂಪತಿ ನಿನ್ನೆಯಷ್ಟೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...