ಬೆಳಗಾವಿ : ಮನೆ ಕಳ್ಳತನ ಆರೋಪಿ ಬಂಧನ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

Date:

ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣೆಯ ಪೊಲೀಸರು ದೊಡ್ಡ ಪ್ರಮಾಣದ ಕಳ್ಳತನದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಸುಮಾರು ₹20.30 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ತಾಲೂಕಿನ ಹಲಸಿ ಗ್ರಾಮದ ಮಹಾದೇವ ನಾರಾಯಣ ಧಮನಿಕರ್ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾದೇವನ ವಿರುದ್ಧ ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಯ ಹಲವಾರು ಪೊಲೀಸ್ ಠಾಣೆಗಳಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ದೂರುಗಳು ದಾಖಲಾಗಿದ್ದವು. ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಮೂವರು ನಿವಾಸಿಗಳ ಮನೆಗಳಲ್ಲಿ ಹಾಗೂ ಧಾರವಾಡ ತಾಲೂಕಿನ ಇಬ್ಬರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕಳವು ಮಾಡಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಶೋಧ ಕಾರ್ಯಾಚರಣೆಯಲ್ಲಿ ಬೈಲಹೊಂಗಲ ಉಪವಿಭಾಗದ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಅವರ ಮಾರ್ಗದರ್ಶನದಲ್ಲಿ, ಕಿತ್ತೂರು ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐಗಳಾದ ಪ್ರವೀಣ್ ಗಂಗೋಳೆ, ಪ್ರವೀಣ್ ಕೋಟಿ ಹಾಗೂ ಎಎಸ್‌ಐಗಳಾದ ರಮೇಶ್ ಗೆಜೇರಿ, ಬಿ.ಪಿ. ಪರಗನ್ನವರ ಮತ್ತು ಸಿಬ್ಬಂದಿ ತಂಡ ತೊಡಗಿಸಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಎಸ್. ಭೀಮಾಶಂಕರ್ ಗುಳೇದ, ಹೆಚ್ಚುವರಿ ಎಸ್‌ಪಿ ಶೃತಿ ಎನ್.ಎಸ್., ಹಾಗೂ ಡಿವೈಎಸ್ಪಿ ಆರ್.ಬಿ. ಬಸರಗಿ ಅವರು ಈ ಯಶಸ್ವಿ ಕಾರ್ಯಚರಣೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...