ಬೆಳಗಾವಿ : ಸವದತ್ತಿ ಯಲ್ಲಮ್ಮನ ದೇವಸ್ಥಾನದ ಹುಂಡಿ ಎಣಿಕೆ ರೂ. 76.60 ಲಕ್ಷ ಕಾಣಿಕೆ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಜುಲೈ 1ರಿಂದ ಆಗಸ್ಟ್ 10ರವರೆಗೆ ನಡೆದ ಹುಂಡಿ ಎಣಿಕೆಯಲ್ಲಿ ಒಟ್ಟು ₹76.60 ಲಕ್ಷ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಇದರಲ್ಲಿ ₹67 ಲಕ್ಷ ನಗದು, ₹5.84 ಲಕ್ಷ ಮೌಲ್ಯದ ಬಂಗಾರದ ಆಭರಣಗಳು, ₹1.15 ಲಕ್ಷ ಮೌಲ್ಯದ ಬೆಳ್ಳಿ ಸಾಮಗ್ರಿಗಳು ಸೇರಿವೆ.

“ಮಳೆಯಿಂದಾಗಿ ದೇವಸ್ಥಾನ ಬಂದ್ ಆಗಿದೆ ಎಂಬುದು ಸುಳ್ಳು. ಎಂದಿನಂತೆ ಧಾರ್ಮಿಕ ಆಚರಣೆ ನಡೆಯುತ್ತಿವೆ. ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆಯಬಹುದು” ಎಂದು ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಉಪಕಾರ್ಯದರ್ಶಿ ನಾಗರತ್ನ ಚೋಳಿನ, ಬೆಳಗಾವಿ ಧಾರ್ಮಿಕ ದತ್ತಿ ಇಲಾಖೆಯ ರೇಣುಕಾ ಶಿಂತ್ರಿ, ಸಿವಾನಂದ ನೇಸರಗಿ, ಅಲ್ಲಮಪ್ರಭು ಪ್ರಭುನವರ, ಎನ್‌.ಎಂ. ಮುದಗೌಡ್ರ, ಆರ್.ಎಚ್‌. ಸವದತ್ತಿ, ಪ್ರಭು ಹಂಜಗಿ, ಎಎಸ್‌ಐಡಿಅರ್ ಸಣ್ಣಮಾಳಗೆ, ಆನಂದ ಗೋರವನಕೋಳ್ಳ ಹಾಗೂ ದೇವಸ್ಥಾನ ಸಿಬ್ಬಂದಿ ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...