ಬೆಳಗಾವಿ | ಹೃದಯಾಘಾತದ ನಾಟಕ ಬಯಲು: ಭೀಕರವಾಗಿ ಪತ್ನಿಯ ಹತ್ಯೆ

Date:

ಪತ್ನಿಯ ಮೇಲಿನ ಸಂಶಯದಿಂದಲೇ ಪತಿಯೊಬ್ಬನು ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಪೋಲಿ ಗ್ರಾಮದಲ್ಲಿ ನಡೆದಿದೆ. ಪತ್ನಿಯ ಸಾವನ್ನು ಹೃದಯಾಘಾತ ಎಂದು ಬಿಂಬಿಸಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಮಹಿಳೆಯನ್ನು ಕಿರಣಾ, ಆರೋಪಿಯನ್ನು ಪತಿ ಅವಿನಾಶ ಎಂದು ಗುರುತಿಸಲಾಗಿದೆ. ಕಳೆದ 12 ವರ್ಷಗಳ ಹಿಂದೆ ವಿವಾಹವಾಗಿದ್ದ ದಂಪತಿಗೆ ಇಬ್ಬರು ಸಣ್ಣ ಮಕ್ಕಳು ಇದ್ದಾರೆ. ಕಾಡಂಚಿನ ಗ್ರಾಮದಲ್ಲಿ ಪುಟ್ಟ ಕಿರಾಣಿ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು.

ಕಳೆದ ಕೆಲ ತಿಂಗಳಿಂದ ಪತಿಗೆ ಪತ್ನಿಯ ಮೇಲೆ ಅಸಂಬದ್ಧ ಸಂಶಯ ಕಾಡುತ್ತಿದ್ದು, ಇದೇ ಕಾರಣಕ್ಕೆ ನಿತ್ಯ ಜಗಳ ನಡೆಯುತ್ತಿತ್ತು. ಎರಡು ದಿನಗಳ ಹಿಂದೆ ಪತ್ನಿಯ ಮೇಲೆ ಹಲ್ಲೆ ನಡೆಸಿದರೂ ಕುಟುಂಬದ ಹಿರಿಯರು ಮಧ್ಯಸ್ಥಿಕೆ ವಹಿಸಿ ಸಮಾಧಾನಪಡಿಸಿದ್ದರು. ಆದರೆ ಮಧ್ಯರಾತ್ರಿ ಪತ್ನಿಯ ಮೇಲೆ ಮತ್ತೆ ತೀವ್ರ ಹಲ್ಲೆ ನಡೆಸಿದ್ದಾನೆ ವಿದ್ಯುತ್ ಶಾಕ್ ನೀಡಿದ್ದು, ಲಟ್ಟಣಿಗೆಯಿಂದ ಹೊಡೆದು ಎಸೆ ನೀಡಿದ್ದಾನೆ ಎನ್ನಲಾಗಿದೆ. ಪರಿಣಾಮವಾಗಿ ಕಿರಣಾ ಮೃತಪಟ್ಟಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಬಳಿಕ ಸಾವನ್ನು ಹೃದಯಾಘಾತ ಎಂದು ಬಿಂಬಿಸಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದಾನೆ. ಆದರೆ ಸ್ಥಳೀಯರ ಮಾಹಿತಿ ಮೇರೆಗೆ ನಂದಗಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಮೃತದೇಹವನ್ನು ಬೆಳಗಾವಿ ಬೀಮ್ಸ್ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಇದು ಕೊಲೆ ಎಂಬುದು ಪ್ರಾಥಮಿಕ ವರದಿಯಲ್ಲಿ ದೃಢವಾಗಿದೆ.

ವಿಚಾರಣೆ ವೇಳೆ ಆರೋಪಿಯು ಪತ್ನಿಯನ್ನು ಕೊಲೆಗೈದಿರುವುದನ್ನು ಒಪ್ಪಿಕೊಂಡಿದ್ದು, ಆತನನ್ನು ಬಂಧಿಸಿ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ. ಈ ಕುರಿತು ನಂದಗಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಗೋಡೆ ಮೇಲೆ ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ

ಈ ಘಟನೆಯಿಂದ ತಾಯಿ ಮೃತಪಟ್ಟಿದ್ದು, ತಂದೆ ಜೈಲಿಗೆ ಹೋಗಿರುವುದರಿಂದ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಮೃತಳ ಸಂಬಂಧಿಕರು ಒತ್ತಾಯಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...