ಬೆಳಗಾವಿ | ಆಸ್ತಿಯ ಆಸೆಗೆ ಪತಿಯ ಕೊಲೆ: ಪತ್ನಿ ಮತ್ತು ಮಗ ಸೇರಿ ಸಂಚು

Date:

ಬೆಳಗಾವಿ ಜಿಲ್ಲೆಯ ಹಿರೇನಂದಿಹಳ್ಳಿ ಗ್ರಾಮದಲ್ಲಿ ನಡೆದ ಭೀಕರ ಕೊಲೆ ಪ್ರಕರಣವನ್ನು ಕಿತ್ತೂರು ಪೊಲೀಸ್‌ ಠಾಣೆ ಪೊಲೀಸರು ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೃತ ವ್ಯಕ್ತಿಯನ್ನು ಕಶ ಕೋಟಿ (50) ಎಂದು ಗುರುತಿಸಲಾಗಿದೆ. ಆಸ್ತಿಗಾಗಿ ಪತ್ನಿಯೇ ಸಂಚು ರೂಪಿಸಿ ಪತಿಯನ್ನು ಕೊಲೆ ಮಾಡಿಸಿದ್ದೆಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಕಶ ಪತ್ನಿ ಕಸ್ತೂರಿ ಕೋಟಿ (42), ಪುತ್ರ ಕಿರಣ್ ಕೋಟಿ (25), ಮಲ್ಲೇಶ ಅಂಬಣ್ಣವರ (32) ಹಾಗೂ ಆತನ ಸ್ನೇಹಿತ ಮುದುಕಪ್ಪ ಕೊಳೇಕರ್ (30) ಬಂಧಿತರಾಗಿದ್ದಾರೆ.

ಮೆಕ್ಕೆಜೋಳದ ಗದ್ದೆಯಲ್ಲಿ ಶವ ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೆಬ್ರವರಿ 20ರಂದು ಗ್ರಾಮದ ಹೊರವಲಯದ ಮೆಕ್ಕೆಜೋಳದ ಗದ್ದೆಯಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆಯಾಗಿತ್ತು. ಶವ ಭಯಾನಕ ಸ್ಥಿತಿಯಲ್ಲಿ ಇದ್ದುದರಿಂದ ಆರಂಭದಲ್ಲಿ ಗುರುತು ಪತ್ತೆಯಾಗಿರಲಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಶವದ ಗುರುತು ಪತ್ತೆಹಚ್ಚಿ ಆರೋಪಿಗಳ ತನಕ ತಲುಪಿದರು.

ಸಾಲ ಮರುಪಾವತಿ ಆಗದ ಹಿನ್ನೆಲೆ ಜಮೀನು ಬರೆದುಕೊಡಲು ಮಲ್ಲೇಶ ಒತ್ತಡ ಹಾಕುತ್ತಿದ್ದನು. ಹಣ ನೀಡಲು ಸಾಧ್ಯವಾಗದ ಸ್ಥಿತಿಯಲ್ಲಿ, ಜಾತ್ರೆಗೆ ಗ್ರಾಮಕ್ಕೆ ಬರುವ ಪತಿಯನ್ನು ಕೊಲೆ ಮಾಡಿದರೆ ಜಮೀನು ತನ್ನ ಹೆಸರಿಗೆ ಬರುತ್ತದೆ ಎಂದು ಕಸ್ತೂರಿ ಸಂಚು ರೂಪಿಸಿದ್ದಳು ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

ಪಾರ್ಟಿ ನೆಪದಲ್ಲಿ ಹತ್ಯೆ

ಫೆಬ್ರವರಿ 16ರಂದು ರಾತ್ರಿ “ಪಾರ್ಟಿ ಮಾಡೋಣ” ಎಂದು ನೆಪವಿಟ್ಟು ಮಲ್ಲೇಶ ಹಾಗೂ ಮುದುಕಪ್ಪ ಕಶನನ್ನು ಕರೆದುಕೊಂಡು ಹೋಗಿದ್ದಾರೆ. ಮಲ್ಲೇಶನ ಹೊಲದಲ್ಲಿ ಸಾರಾಯಿ ಕುಡಿಸಿ ಬಳಿಕ ಹಗ್ಗದಿಂದ ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ.

ತಮ್ಮ ಜಮೀನಿನಲ್ಲಿ ಶವ ಬಿಟ್ಟರೆ ಅನುಮಾನ ಬರುತ್ತದೆ ಎಂದು ಬೇರೆಯವರ ಹೊಲದಲ್ಲಿ ಶವ ಎಸೆದು ಆರೋಪಿಗಳು ಪರಾರಿಯಾಗಿದ್ದರು.

ಈ ಸುದ್ದಿ ಓದಿದ್ದಿರಾ? ಬೆಳಗಾವಿ ಅಂಗನವಾಡಿ ಕೇಂದ್ರಗಳಲ್ಲಿ ಅವಧಿ ಮೀರಿದ ಪೌಷ್ಟಿಕ ಆಹಾರ ವಿತರಣೆ ಆರೋಪ

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಿತ್ತೂರು ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...