ಬೆಳಗಾವಿ : 2028ಕ್ಕೆ ಜೆಸಿಬಿ ಪಕ್ಷ ಸ್ಥಾಪಿಸಿ ಅಧಿಕಾರಕ್ಕೆ ಬರುತ್ತೇನೆ: ಯತ್ನಾಳ

Date:

ಬೆಳಗಾವಿ ಜಿಲ್ಲೆಯ ಅಥಣಿ ನಗರದ ಶಿವಾಜಿ ವೃತ್ತದಲ್ಲಿ ಭಾನುವಾರ ಶಿವಪ್ರತಿಷ್ಠಾನ ಹಿಂದೂಸ್ತಾನ ಘಟಕ ಹಾಗೂ ತಾಲ್ಲೂಕು ಏಕಛತ್ರ ಮರಾಠಾ ಸಮಾಜ ಸಂಘದ ಸಂಯುಕ್ತಾಶ್ರಯದಲ್ಲಿ ಭೋಜರಾಜ ಕ್ರೀಡಾಂಗಣದಲ್ಲಿ ಧ್ವಜಸ್ತಂಭಕ್ಕೆ ಪೂಜೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸರ್ಕಾರ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ 7 ವರ್ಷ ಜೈಲು ಶಿಕ್ಷೆಯ ಮಸೂದೆ ತರಲು ಮುಂದಾಗಿದೆ ಎಂದು ಟೀಕಿಸಿದರು. “ಆ ಮಸೂದೆ ಜಾರಿಯಾದರೆ ಮೊದಲು ನಾನೇ ಸಿಗಬಹುದು. ಆದರೆ ಜೈಲಿನಿಂದ ಹೇಗೆ ಹೊರಬರಬೇಕು ಎಂಬುದು ನನಗೆ ಗೊತ್ತು” ಎಂದು ಹೇಳಿದರು.

ಇದೇ ವೇಳೆ 2028ರಲ್ಲಿ ‘ಜೆಸಿಬಿ’ ಹೆಸರಿನ ಹೊಸ ಪಕ್ಷ ಸ್ಥಾಪಿಸಿ 143 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ತಾವೇ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುವುದಾಗಿ ಘೋಷಿಸಿದರು. “ಭ್ರಷ್ಟರನ್ನು ಅಧಿಕಾರದಿಂದ ದೂರ ಇಡುವ ಕಾಲ ಬಂದಿದೆ” ಎಂದು ಯತ್ನಾಳ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ವಿವಿಧ ಸಮಾಜದ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...