ಬೆಳಗಾವಿ | ಬಿಜೆಪಿ ಶಾಸಕ ಅಭಯ್ ಪಾಟೀಲ್ ಕ್ಷೇತ್ರದಲ್ಲಿ ಅಕ್ರಮ; ತನಿಖೆಗೆ ಸತೀಶ್ ಜಾರಕಿಹೊಳಿ ಅದೇಶ

Date:

ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿ ಶಾಸಕ ಅಭಯ್ ಪಾಟೀಲ್ ನಡುವಿನ ಜಟಾಪಟಿ ಭಾರೀ ಸದ್ದು ಮಾಡುತ್ತಿದೆ. ಇತ್ತೀಚೆಗೆ, ಬೆಳಗಾವಿ ಮಹಾನಗರ ಪಾಲಿಕೆ ವಿಚಾರಕ್ಕೆ ಆರಂಭವಾದ ರಾಜಕೀಯ ಕದನ, ಇದೀಗ ಅಕ್ರಮ, ತನಿಖೆಗಳ ಮಟ್ಟಕ್ಕೆ ಹೋಗಿ ನಿಂತಿದೆ. ಅಭಯ್ ಪಾಟೀಲ್ ಕ್ಷೇತ್ರದಲ್ಲಿ ನಿರ್ಮಾಣವಾಗಿರುವ ತಿನಿಸು ಕಟ್ಟೆ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದ್ದು, ತನಿಖೆಗೆ ಸತೀಶ್‌ ಜಾರಕಿಹೊಳಿ ಆದೇಶಿಸಿದ್ದಾರೆ.

ಅಭಯ್ ಪಾಟೀಲ್ ಅವರು ತಮ್ಮ ಬೆಳಗಾವಿ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಗೆ ಸೇರಿದ 13 ಗಂಟೆ ಜಾಗದಲ್ಲಿ 2019-20ರಲ್ಲಿ ತಿನಿಸು ಕಟ್ಟೆ ನಿರ್ಮಾಣ ಮಾಡಿದ್ದರು. ಅಲ್ಲಿನ ಮಳಿಗೆಗಳನ್ನು ಅಭಯ್ ಪಾಟೀಲ್ ಅವರು ತಮ್ಮ ಬೆಂಬಲಿಗರಿಗೆ ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ ಮತ್ತು ನಾಲೆ ಮೇಲೆ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಆ ಕಟ್ಟೆ ನಿರ್ಮಾಣದಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ಪಾಲಿಕೆಯ ಮಾಜಿ ಸದಸ್ಯ ದೀಪಕ ಜಮಖಂಡಿ ಲೋಕೋಪಯೋಗಿ ಇಲಾಖೆಗೆ ದೂರು ನೀಡಿದ್ದರು.

ಮಳಿಗೆಗಳು ಒಬ್ಬರ ಹೆಸರಿನಲ್ಲಿ ಹರಾಜಾಗಿವೆ. ಆದರೆ, ಅವರು ಮತ್ತೊಬ್ಬರಿಗೆ ಬಾಡಿಗೆಗೆ ನೀಡಿದ್ದಾರೆ. ಅಲ್ಲದೆ, ಅವರು ಸರ್ಕಾರ ನಿಗದಿ ಮಾಡಿರುವ ಬಾಡಿಗೆ ಮೊತ್ತಕ್ಕಿಂತ ಹೆಚ್ಚು ಬಾಡಿಗೆ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ ಅಕ್ರಮಗಳ ಬಗ್ಗೆ ಲೋಕೋಪಯೋಗಿ ಇಲಾಖೆಯಿಂದ ತನಿಖೆ ನಡೆಸಲು ಸತೀಶ್ ಜಾರಕಿಹೊಳಿ ಆದೇಶಿಸಿದ್ದಾರೆ. ಇಲಾಖೆಯ ಚೀಫ್ ಇಂಜಿನಿಯರ್ ದುರ್ಗಪ್ಪ ನೇತೃತ್ವದಲ್ಲಿ ಆರು ಮಂದಿ ಅಧಿಕಾರಿಗಳ ತಂಡ ಬೆಳಗಾವಿಗೆ ತೆರಳಿದ್ದು, ತನಿಖೆ ಆರಂಭಿಸಿದೆ. ಅಧಿಕಾರಿಗಳು ಎಲ್ಲ ಮಳಿಗೆಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...