ಬೆಳಗಾವಿ | ಅಸಮರ್ಪಕ ಬಸ್‌ ಸೇವೆ ವಿದ್ಯಾರ್ಥಿಗಳ ಪ್ರತಿಭಟನೆ

Date:

ಪ್ರತಿಭಟನೆ ನಡೆಸುತ್ತಿದ್ದ ವೇಳೆ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಸ್ತವಾಡದಲ್ಲಿ ನಡೆದಿದೆ.

ಬಸ್ತವಾಡದಲ್ಲಿ ವಿದ್ಯಾರ್ಥಿಗಳು ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಸರಿಯಾದ ಸಮಯಕ್ಕೆ ಬಸ್‌ಗಳು ಬರುತ್ತಿಲ್ಲ ಮತ್ತು ವಿದ್ಯಾರ್ಥಿಗಳಿದ್ದರೆ ಬಸ್‌ಗಳನ್ನು ನಿಲ್ಲಿಸುತ್ತಿಲ್ಲ, ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂದು ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಪ್ರತಿಭಟನೆ ನಡೆಸುತ್ತಿದ್ದ ಪ್ರಿಯಾ ಕಾಂಬಳೆ ಹಾಗೂ ಪ್ರಿಯಾ ಹೋಳ್ಕರ್ ಎಂಬ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ತಮಗೆ ಸಮರ್ಪಕ ಬಸ್‌ ಸೇವೆ ಒದಗಿಸುವಂತೆ ವಿದ್ಯಾರ್ಥಿಗಳು ಬಸ್‌ ತಡೆದು (ಜ.2) ಪ್ರತಿಭಟನೆ ನಡೆಸುತ್ತಿದ್ದು, ತಮ್ಮ ಸಮಸ್ಯೆ ಆದಷ್ಟು ಬೇಗ ಬಗೆಹರಿಸುವಂತೆ ಸರ್ಕಾರಕ್ಕೆ ಆಗ್ರಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...