ಬೆಳಗಾವಿ | ವಿಶೇಷಚೇತನ ಮಗುವನ್ನು ದತ್ತು ಪಡೆದ ಇಟಲಿ ದಂಪತಿಗಳು

Date:

ಬೆಳಗಾವಿ ನಗರದ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿಮಠ ಬಾಲಕಲ್ಯಾಣ ಕೇಂದ್ರದಲ್ಲಿನ ವಿಶೇಷಚೇತನ ಮಗುವನ್ನು ಇಟಲಿ ದೇಶದ ದಂಪತಿಗಳು ಸೋಮವಾರ ದತ್ತು ಪಡೆದು ಮಾನವಿಯತೆಗೆ ಸಾಕ್ಷಿಯಾಗಿದ್ದಾರೆ.

ಇಟಲಿಯ ಪ್ಲಾರೆನ್ಸ್ ನಗರದ ನಿವಾಸಿಗಳಾದ ಕೋಸ್ತಾಂಜಾ ಹಾಗೂ ಬುಜಾರ್‌ ಡೆಡೆ ದಂಪತಿ ದತ್ತು ಪಡೆದವರು, ದತ್ತು ಪಡೆದ ಎರಡೂವರೆ ವರ್ಷದ ಮಗುವಿಗೆ ಆನಂದ ಎಂದು ಹೆಸರಿಡಲಾಗಿದೆ. ಈ ಮಗು ಅವಧಿಪೂರ್ವ ಜನಿಸಿತ್ತು. ಆಗ 1.3 ಕೆಜಿ ತೂಕ ಮಾತ್ರ ಇತ್ತು. ದೃಷ್ಟಿದೋಷವೂ ಸೇರಿ ಆರೋಗ್ಯದ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದೆ. ಹೆತ್ತವರು ಬಿಟ್ಟುಹೋದ ಹಸುಳೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ರಕ್ಷಣೆ ಮಾಡಿದ್ದರು. ಎರಡೂವರೆ ವರ್ಷಗಳಿಂದ ಗಂಗಮ್ಮ ಚಿಕ್ಕುಂಬಿಮಠ ಬಾಲಕಲ್ಯಾಣ ಕೇಂದ್ರದಲ್ಲಿ ಪೋಷಣೆ ಮಾಡಲಾಗಿದೆ.

ಆದರೆ, ಕೋಸ್ತಾಂಜಾ ಹಾಗೂ ಬುಜಾರ್ ಡೆಡೆ ದಂಪತಿ ವಿಶೇಷಚೇತನ ಮಗುವಿಗೆ ಹೊಸಬಾಳು ನೀಡಲು ಬಂದಿದ್ದಾರೆ. ತಮಗೆ ಮಕ್ಕಳಾಗಲಿಲ್ಲ ಎಂದು ಕೊರಗದೇ, ವಿಶೇಷ ಚೇತನ ಮಗುವೊಂದನ್ನು ಪೋಷಣೆ ಮಾಡಲು ಮುಂದಾಗಿದ್ದು ಪ್ರಶಂಸನೀಯ’ ಎಂದು ಬಾಲಕಲ್ಯಾಣ ಕೇಂದ್ರದ ಅಧ್ಯಕ್ಷೆ ಡಾ.ಮನಿಷಾ ಭಾಂಡನಕ‌ರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಈ ದಂಪತಿ ಆರು ವರ್ಷಗಳ ಹಿಂದೆ ದತ್ತು ಪಡೆಯಲು ಅರ್ಜಿ ಸಲ್ಲಿಸಿದ್ದರು. ‘ಕಾರಾ’ ನಿಯಮ (ಸೆಂಟ್ರಲ್‌ ಅಡಾಪ್ಟನ್ ರಿಸೋರ್ಸ್ ಅಥಾರಿಟಿ)ದಂತೆ ಎಲ್ಲವನ್ನೂ ಪರಿಶೀಲಿಸಿ, ಸಂದರ್ಶನ ಮಾಡಿ ಮಗು ದತ್ತು ನೀಡಲಾಗಿದೆ. ಮಂಗಳವಾರ (ಫೆ.18) ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಮಗುವನ್ನು ಹಸ್ತಾಂತರಿಸಲಾಗುವುದು’ ಎಂದು ಅವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...