ಬೆಳಗಾವಿ : ಬೇರೆ ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಕ್ಕಿರುವ ಗೌರವ ಮತ್ತು ಸ್ಥಾನಮಾನ ಕಿತ್ತೂರು ರಾಣಿ ಚೆನ್ನಮ್ಮನಿಗೆ ಸಿಕ್ಕಿಲ್ಲ : ಚನ್ನರಾಜ ಹಟ್ಟಿಹೊಳಿ

Date:

ಬೇರೆ ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಕ್ಕಿರುವ ಗೌರವ ಮತ್ತು ಸ್ಥಾನಮಾನ ಕಿತ್ತೂರು ರಾಣಿ ಚೆನ್ನಮ್ಮನಿಗೆ ಸಿಕ್ಕಿಲ್ಲ. ಆದ್ದರಿಂದ ಚೆನ್ನಮ್ಮನ ಇತಿಹಾಸದ ಕುರಿತು ಇನ್ನಷ್ಟು ಆಳವಾದ ಸಂಶೋಧನೆಗಳು ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಕಿತ್ತೂರಿನಲ್ಲಿ ಗುರುವಾರದಿಂದ ಆರಂಭವಾದ ಐತಿಹಾಸಿಕ ಕಿತ್ತೂರು ರಾಣಿ ಚೆನ್ನಮ್ಮ ವಿಜಯೋತ್ಸವ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಅವರು ಮಾತನಾಡಿದರು.
“ಮಹಾನ್ ಪುರುಷರ ಇತಿಹಾಸವನ್ನು ಇಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಇಂತಹ ಉತ್ಸವಗಳನ್ನು ಆಚರಿಸುತ್ತೇವೆ. ರಾಜ್ಯ ಸರ್ಕಾರವು ಈ ಬಾರಿ 5 ಕೋಟಿ ರೂ. ಅನುದಾನ ನೀಡಿ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ಕೈಗೊಂಡಿದೆ,” ಎಂದರು.

ಕಾರ್ಯಕ್ರಮದಲ್ಲಿ ಕಿತ್ತೂರು ಕಲ್ಮಠದ ಶ್ರೀ ಮ.ನಿ.ಪ್ರ.ಸ್ವ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು, ನಿಚ್ಚಣಕಿಯ ಶ್ರೀ ಮ.ನಿ.ಪ್ರ.ಸ್ವ ಪಂಚಾಕ್ಷರಿ ಮಹಾಸ್ವಾಮಿಗಳು, ಲಿಂಗಾಯತ ಪಂಚಮಸಾಲಿ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಶಾಸಕರಾದ ಬಾಬಾಸಾಹೇಬ್ ಪಾಟೀಲ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಎಸ್.ಪಿ. ಭೀಮಾಶಂಕರ್ ಗುಳೇದ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ವಿಧಾನ ಪರಿಷತ್ ಸದಸ್ಯರು ಹಣಮಂತ ನಿರಾಣಿ, ಭರಮಣ್ಣ ಉಪ್ಪಾರ, ಜಯಸಿದ್ರಾಮ ಮಾರಿಹಾಳ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...