ಬೆಳಗಾವಿ | ಮಳೆ ಕೊರತೆ; ಗಗನಕ್ಕೇರಿದ ತರಕಾರಿ ದರ

Date:

ಮಳೆ ಕೊರತೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ತರಕಾರಿ ಬೆಳೆಯುವ ಪ್ರದೇಶ ಅರ್ಧದಷ್ಟು ಕಡಿತವಾಗಿದೆ. ಪರಿಣಾಮ, ಇಲ್ಲಿನ ಮಾರುಕಟ್ಟೆಗೆ ಬೇಡಿಕೆಗೆ ತಕ್ಕಷ್ಟು ತರಕಾರಿ ಪೂರೈಕೆಯಾಗದೆ, ಕೆಲವು ತರಕಾರಿಗಳ ಬೆಲೆ ಗಗನಕ್ಕೇರಿದೆ.

ನಾಲ್ಕು ತಿಂಗಳ ಹಿಂದೆ ಟೊಮೆಟೊ ದರ ಕೆಜಿಗೆ 100 ರೂ. ದಾಟಿತ್ತು. ನಂತರ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೊ ಬಂದಿದ್ದರಿಂದ ಕೆಜಿಗೆ 20ರಿಂದ 40 ರೂ.ಗೆ ದರ ಇಳಿದಿತ್ತು. ಈಗಲೂ ಅಷ್ಟೇ ದರ ಮುಂದುವರಿದಿದೆ. ಆದರೆ, ಬದನೆಕಾಯಿ ದರ ಕೆಜಿಗೆ 60ರಿಂದ 70 ರೂ, ಗಜ್ಜರಿ 40ರಿಂದ 50 ರೂ, ಬೆಂಡೆಕಾಯಿ 60ರಿಂದ 80 ರೂ, ಬೀನ್ಸ್‌ 80 ರೂ.ಗೆ ಏರಿಕೆಯಾಗಿದೆ. 25ರಿಂದ 30 ರೂ. ಒಂದು ಕೆ.ಜಿ ಆಲೂಗಡ್ಡೆ ಮಾರಾಟವಾಗುತ್ತಿದೆ.

ತರಕಾರಿಕೊಳ್ಳಲು ಬರುತ್ತಿರುವ ಗ್ರಾಹಕರು, ಕಳೆದೊಂದು ವಾರದಿಂದ ಮಾರುಕಟ್ಟೆಯಲ್ಲಿ ವಿವಿಧ ತರಕಾರಿಗಳ ದರ ಹೆಚ್ಚಿದೆ. ಇತ್ತೀಚಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದೇವೆ. ಎಂದು ತಮ್ಮ ಬೇಸರ ಹೊರಹಾಕುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿ ನಗರ ಮಾತ್ರವಲ್ಲ, ಜಿಲ್ಲೆಯ ಎಲ್ಲ ಮಾರುಕಟ್ಟೆಗಳಲ್ಲೂ ಇದೇ ಪರಿಸ್ಥಿತಿಯಿದೆ. ಬರದ ಹಿನ್ನೆಲೆಯಲ್ಲಿ ಈ ಬಾರಿ ತರಕಾರಿ ಬೆಳೆ ಇಳುವರಿ ಕುಸಿದಿದೆ. ಎಷ್ಟೋ ಕಡೆ ಒಂದಿಷ್ಟು ಬೆಳೆಯೂ ಬಂದಿಲ್ಲ. ಹಾಗಾಗಿ ತರಕಾರಿ ದರ ಹೆಚ್ಚುತ್ತಲೇ ಇದೆ. ಜನರು ಚೌಕಾಸಿ ಮಧ್ಯೆಯೂ ಖರೀದಿಸುತ್ತಿದ್ದಾರೆ ಎನ್ನುತ್ತಿದ್ದಾರೆ ತರಕಾರಿ ಮಾರುವವರು.

ಬೆಳಗಾವಿ, ಖಾನಾಪುರ, ಚನ್ನಮ್ಮನ ಕಿತ್ತೂರು, ಗೋಕಾಕ, ಮೂಡಲಗಿ ತಾಲೂಕುಗಳಲ್ಲಿ ಹೆಚ್ಚಾಗಿ ತರಕಾರಿ ಬೆಳೆಯಲಾಗುತ್ತದೆ. ಕಳೆದ ವರ್ಷ ಹಿಂಗಾರು ಹಂಗಾಮಿನಲ್ಲಿ 8,900 ಹೆಕ್ಟೇರ್‌ನಲ್ಲಿ ತರಕಾರಿ ಬೆಳೆಯಲಾಗಿತ್ತು. ಈ ಬಾರಿಯೂ ಅಷ್ಟೇ ಬಿತ್ತನೆಯಾಗಬಹುದೆಂಬನಿರೀಕ್ಷೆ ಇತ್ತು. ಆದರೆ, ಬರದ ಪರಿಸ್ಥಿತಿಯಿಂದಾಗಿ ಶೇ. 52ರಷ್ಟು ಮಾತ್ರ ಬಿತ್ತನೆಯಾಗಿದೆ. ಈ ಬಾರಿ ಇಳುವರಿಯೂ ಕುಸಿದಿರುವುದು ತರಕಾರಿಗಳ ದರ ಹೆಚ್ಚಲು ಕಾರಣವಾಗಿರಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುರಗೋಡ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...