ಬೆಳಗಾವಿ | ವಕೀಲರ ಹತ್ಯೆ ಮತ್ತು ಹಲ್ಲೆ ವಿರೋಧಿಸಿ ವಕೀಲರಿಂದ ಪ್ರತಿಭಟನೆ

Date:

ವಕೀಲ ಸಂತೋಷ ಪಾಟೀಲ ಹತ್ಯೆ ಮಾಡಿದ ಹಾಗೂ ಗೋಕಾಕದ ವಕೀಲ ಸಿ.ಬಿ. ಗಿಡ್ಡನವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು’ ಎಂದು ಆಗ್ರಹಿಸಿ ಬೆಳಗಾವಿ ನಗರದಲ್ಲಿ ಗುರುವಾರ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ರಾಣಿ ಚನ್ನಮ್ಮ ವೃತ್ತದಲ್ಲಿ ಕೆಲ ಕಾಲ ಧರಣಿ ಮಾಡಿದ ವಕೀಲರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಇದರಿಂದಾಗಿಯೇ ಅಪರಾಧ ಸಂಖ್ಯೆಗಳು ಹೆಚ್ಚುತ್ತಿವೆ. ನ್ಯಾಯಕ್ಕಾಗಿ ಹೋರಾಡುವ ವಕೀಲರ ಮೇಲೆಯೇ ಪದೇಪದೇ ಹಲ್ಲೆಗಳು ನಡೆಯುತ್ತಿವೆ. ಈಗಾಗಲೇ ಕೆಲವರು ಹತ್ಯೆ ನಡೆದಿದೆ. ಆದರೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ವಕೀಲರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಯಂತ್ರಿಸಲು ಕಠಿಣ ಕಾನೂನು ರೂಪಿಸಬೇಕು. ಈ ಬಗ್ಗೆ ಹಲವು ವರ್ಷಗಳಿಂದ ಆಗ್ರಹ ಮಾಡುತ್ತಿದ್ದರೂ ನಿರ್ಲಕ್ಷ್ಯ ಮಾಡಲಾಗಿದೆ’ ಎಂದು ಬಾರ್ ಅಸೋಸಿಯೇಷನ್‌ ಅಧ್ಯಕ್ಷ ಎಸ್.ಎಸ್. ಕಿವಡಸಣ್ಣನವರ ಕಿಡಿ ಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಯುವ ವಕೀಲ ಸಂತೋಷ ಪಾಟೀಲ ಅವರನ್ನು ಕೋರ್ಟ್ ಆವರಣದಿಂದಲೇ ಅಪಹರಣ ಮಾಡಿಕೊಂಡು ಹೋಗಿ ಹತ್ಯೆ ಮಾಡಲಾಗಿದೆ. ಇದಕ್ಕೆ ಸಾಕಷ್ಟು ಸಾಕ್ಷಿಗಳೂ ಸಿಕ್ಕಿವೆ. ಈ ಘಟನೆಯಿಂದ ವಕೀಲರಲ್ಲಿ ಆತಂಕದ ವಾತಾವರಣ ಉಂಟಾಗಿದೆ. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...