ಬಿಯರ್ ಕುಡಿಸಿ ಅಪ್ರಾಪ್ತಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ಬೆಳಗಾವಿ ಪೋಕೋ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಕೇವಲ 8 ತಿಂಗಳ ಅವಧಿಯಲ್ಲಿ ವಿಚಾರಣೆ ಪೂರ್ಣಗೊಳಿಸಿ ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಲಾಗಿದೆ.
ಆರೋಪಿಗಳಾದ ಸಾಕೀಬ್ ನಿಜಾಮಿ (22) ಹಾಗೂ ರವಿ ನಾಯ್ಯೋಡಿ ಅವರಿಗೆ ಜೀವಾವಧಿ ಜೈಲು ಶಿಕ್ಷೆ ಜೊತೆಗೆ ತಲಾ ₹8.76 ಲಕ್ಷ ದಂಡ ವಿಧಿಸಲಾಗಿದೆ. ಕೃತ್ಯಕ್ಕೆ ಸಹಕರಿಸಿದ ರೋಹನ್ ಪಾಟೀಲ್ ಹಾಗೂ ಅಶುತೋಷ್ ಪಾಟೀಲ್ ಅವರಿಗೆ ತಲಾ 20 ವರ್ಷ ಜೈಲು ಶಿಕ್ಷೆ ಮತ್ತು ₹6 ಲಕ್ಷ ದಂಡ ವಿಧಿಸಲಾಗಿದೆ. ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಸಂತ್ರಸ್ತೆಗೆ ₹10 ಲಕ್ಷ ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸಿದ್ದಾರೆ.

2025 ಮೇ 10ರಂದು ಬೆಳಗಾವಿಯ ಸಾವಗಾಂವ್ ಫಾರ್ಮ್‌ಹೌಸ್‌ನಲ್ಲಿ ಈ ಗ್ಯಾಂಗ್ ರೇಪ್ ನಡೆದಿತ್ತು. ಅಪ್ರಾಪ್ತಿಯೆಂದು ತಿಳಿದಿದ್ದರೂ ಆರೋಪಿಗಳು ಬಿಯರ್ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿ, ಸಂತ್ರಸ್ತೆಯ ಚಿನ್ನದ ಸರವನ್ನು ಕಳವು ಮಾಡಿದ್ದರು. ಈ ಕುರಿತು ಸಂತ್ರಸ್ತೆಯ ಪೋಷಕರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಂತರ ಪ್ರಕರಣವನ್ನು ಮಾರ್ಕೆಟ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಎಲ್.ವಿ. ಪಾಟೀಲ ವಾದ ಮಂಡಿಸಿದ್ದರು.