ಬೆಳಗಾವಿ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಫಯಾಜ್ ಅಹ್ಮದ್ ಶೇಖ್ ಲಂಚ ಸ್ವೀಕಾರದ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಅಥಣಿ ತಾಲ್ಲೂಕಿನ ಐಗಳಿ ಗ್ರಾಮದಲ್ಲಿ ಜಪ್ತಿ ಮಾಡಲಾಗಿದ್ದ ಮರಳನ್ನು ಗುತ್ತಿಗೆದಾರನಿಗೆ ಬಳಕೆಗಾಗಿ ವಿಲೇವಾರಿ ಮಾಡಲು ಟಾಸ್ಕ್‌ಫೋರ್ಸ್ ಸಮಿತಿಯ ನಿರ್ಧಾರ ಹೊರಡಿಸುವ ಸಂದರ್ಭದಲ್ಲಿ ಅಧಿಕಾರಿ ಶೇಖ್ ₹15,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಕುರಿತು ಶೀತಲ ಸನದಿ ಎಂಬುವವರು ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಿದ ಹಿನ್ನಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.





