ಪಹಣಿ ಪತ್ರದಲ್ಲಿದ್ದ ನಿರ್ಬಂಧ ತೆರವುಗೊಳಿಸಲು ₹80 ಸಾವಿರ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಹಶಿಲ್ದಾರ ಕಚೇರಿಯಲ್ಲಿ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.
ತಾಲೂಕಿನ ಸವಸುದ್ದಿ ಗ್ರಾಮದ ರೈತ ಶಿವಾನಂದ ದುಂಡಗಿ ಅವರ ಅಜ್ಜನಿಗೆ 1974ರಲ್ಲಿ ಭೂ ನ್ಯಾಯಮಂಡಳಿ ಆದೇಶದಂತೆ ಜಮೀನು ಮಂಜೂರಾಗಿದ್ದು, ಕನಿಷ್ಠ 15 ವರ್ಷಗಳ ಕಾಲ ಪರಬಾರೆ ಮಾಡಬಾರದೆಂದು ನಿರ್ಬಂಧ ವಿಧಿಸಲಾಗಿತ್ತು. ಈ ನಿರ್ಬಂಧ ತೆರವುಗೊಳಿಸುವ ಸಲುವಾಗಿ ಅರ್ಜಿ ಸಲ್ಲಿಸಲಾಗಿತ್ತು.
ನಿರ್ಬಂಧ ತೆರವುಗಾಗಿ ರಾಯಬಾಗ ತಹಶಿಲ್ದಾರ ಕಚೇರಿ ಸಿಬ್ಬಂದಿ ಚಂದ್ರಮಪ್ಪ ಮೋರಟಗಿ ಅವರು ₹80 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಬಲೆಗೆ ಬೀಳಿಸಿದ್ದಾರೆ.
ನಿರ್ಬಂಧ ತೆರವುಗಾಗಿ ರಾಯಬಾಗ ತಹಶಿಲ್ದಾರ ಕಚೇರಿ ಸಿಬ್ಬಂದಿ ಚಂದ್ರಮಪ್ಪ ಮೋರಟಗಿ ಅವರು ₹80 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಬಲೆಗೆ ಬೀಳಿಸಿದ್ದಾರೆ.
ದಾಳಿಯಲ್ಲಿ ಲೋಕಾಯುಕ್ತ ಇನ್ಸೆಕ್ಟರ್‌ಗಳಾದ ಬಾಲಚಂದ್ರ ಲಕ್ಕಮ್ಮ, ಗೋವಿಂದಗೌಡ ಹಾಗೂ ಸಿಬ್ಬಂದಿಗಳಾದ ರವಿ, ರಾಜು, ಸಂತೋಷ, ಗಿರೀಶ್, ಅಭಿಜಿತ್, ಬಸವರಾಜ ಉಪಸ್ಥಿತರಿದ್ದರು. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.