ಬೆಳಗಾವಿ | ಟೋಲ್ ನಾಕಾದಲ್ಲಿ ಲಾರಿ ಬೆಂಕಿಗಾಹುತಿ

Date:

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನಲ್ಲಿರುವ ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ಕೂಗನೊಳ್ಳಿ ಟೋಲ್‌ ನಾಕಾ ಬುಧವಾರ ರಾತ್ರಿ ಬೆಂಕಿಗೆ ಆಹುತಿಯಾಗಿದೆ. ಘಟನೆಯಲ್ಲಿ ಲಾರಿ ಸಂಪೂರ್ಣ ಸುಟ್ಟಿದ್ದು, ಯಾವುದೇ ಪ್ರಾಣಹಾನಿ ಆಗಿಲ್ಲ.ಲಾರಿಯೊಂದು ಬೆಳಗಾವಿಯಿಂದ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ಹೊರಟಿತ್ತು.

ಬುಧವಾರ ರಾತ್ರಿ ಕೂಗನೊಳ್ಳಿ ಟೋಲ್ ನಾಕಾ ಬಳಿ ಲಾರಿ ಟೋಲ್ ದಾಟಲು ಬಂದು ನಿಂತಿತು. ಲಾರಿಯನ್ನು ಚಾಲಕ ತುಸು ಹಿಂದಕ್ಕೆ ಚಲಿಸುವಾಗ ಆಯಿಲ್ ಟ್ಯಾಂಕ್ ರಸ್ತೆಯ ವಿಭಜಕಕ್ಕೆ ಗುದಿತು. ಅದರಿಂದ ಹೊತಿಕೊಂಡ ಬೆಂಕಿ ಕಿಡಿಗಳು ಪಕ್ಕದಲ್ಲಿಯೇ ಇದ್ದ ಲಾರಿಯ ಬ್ಯಾಟರಿಗೆ ತಾಗಿದವು. ಬ್ಯಾಟರಿ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡಿತು.

ನೋಡನೋಡುತ್ತಿದ್ದಂತೆಯೇ ಬೆಂಕಿ ಕೆನ್ನಾಲಿಗೆ ಟೋಲ್ ನಾಕಾದ ಟೋಲ್‌ ಕಲೆಕ್ಷನ್ ಕೇಂದ್ರಗಳಿಗೂ ವ್ಯಾಪಿಸಿತು. ಟೋಲ್ ನಾಕಾದ ಸಿಬ್ಬಂದಿ ಹಾಗೂ ಲಾರಿಯಲ್ಲಿದ್ದವರು ದೂರ ಓಡಿ ಹೋದರು. ನಾಕಾದ ಎರಡು ಕಲೆಕ್ಷನ್ ಕೇಂದ್ರಗಳು ಸುಟ್ಟುಹೋದವು.ನಂತರ ಬಂದ ನಿಪ್ಪಾಣಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...