ಬೆಳಗಾವಿ | ಪ್ರಿಯತಮೆಗೆ ಚೂರಿಯಿಂದ ಇರಿದು ತಾನು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ

Date:

ಮದುವೆಗೆ ಒಪ್ಪದ ಕಾರಣ ಯುವಕ ಪ್ರಿಯತಮೆಗೆ ಚೂರಿ ಇರಿದು ಕೊಲೆ ಮಾಡಿ ನಂತರ ತಾನೂ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ನಗರದ ಶಹಾಪುರದ ನವಿ ಗಲ್ಲಿ ಮನೆಯಲ್ಲಿ ನಡೆದಿದೆ.

ಶಹಾಪುರದ ನಾಥ ಪೈ ವೃತ್ತದ ನಿವಾಸಿ ಐಶ್ವರ್ಯಾ ಮಹೇಶ ಲೋಹಾರ ಕೊಲೆಯಾದ ಯುವತಿ, ಯಳ್ಳೂರ ಗ್ರಾಮದ ಪ್ರಶಾಂತ ಯಲ್ಲಪ್ಪ ಕುಂಡೇಕರ (29) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಐಶ್ವರ್ಯಾ ಮತ್ತು ಪ್ರಶಾಂತ ಇಬ್ಬರೂ ಒಂದೂವರೆ ವರ್ಷಗಳಿಂದ ಪ್ರೀತಿಸುತ್ತಿದ್ದರು. ಶಿಕ್ಷಣ ಮುಗಿಸಿದ ಬಳಿಕ ಪ್ರಶಾಂತ ಬೆಳಗಾವಿಯಲ್ಲಿ ಪೇಂಟ‌ರ್ ಆಗಿದ್ದರು. ಮದುವೆಗೆ ಯುವತಿಯ ತಾಯಿ ವಿರೋಧವಿತ್ತು. ಯುವತಿ ಇನ್ನೂ ಚಿಕ್ಕವಳಿದ್ದು, ಉತ್ತಮ ಭವಿಷ್ಯವಿದೆ. ನೀನು ಹೆಚ್ಚು ಗಳಿಸಿ ನಿನ್ನ ಕಾಲ ಮೇಲೆ ನಿಂತುಕೊಳ್ಳುವಂತೆ ಬೆಳೆ. ಆಮೇಲೆ ನೋಡೋಣ ಎಂದಿದ್ದರು. ಇದೇ ವಿಚಾರವಾಗಿ ಯುವಕ- ಯುವತಿ ಮಧ್ಯೆ ಜಗಳ ಆಗಿದೆ ಎಂದು ನಗರ ಪೊಲೀಸ್ ಕಮಿಷನ‌ರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಶ್ವರ್ಯ ಅವರು ತಮ್ಮ ಚಿಕ್ಕಮ್ಮನ ಮನೆಗೆ ಯುವಕನನ್ನು ಕರೆಸಿಕೊಂಡು ಮಾತನಾಡಲು ಯತ್ನಿಸಿದರು. ಇಬ್ಬರ ನಡುವೆ ವಾಗ್ವಾದ ನಡೆಯಿತು. ಸಂಜೆ 5.30ರ ಸುಮಾರಿಗೆ ಪ್ರಶಾಂತ ಚೂರಿಯಿಂದ ಐಶ್ವರ್ಯ ಕುತ್ತಿಗೆ ಭಾಗಕ್ಕೆ ಚುಚ್ಚಿ ಕೊಲೆ ಮಾಡಿ ನಂತರ ತನ್ನ ಕುತ್ತಿಗೆಗೆ
ಚುಚ್ಚಿಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ,

‘ಯುವಕ- ಯುವತಿ ಭೇಟಿಯಾದ ಕೋಣೆಯಲ್ಲಿ ಒಂದು ವಿಷದ ಬಾಟಲಿಯೂ ಸಿಕ್ಕಿದೆ. ಯುವತಿಗೆ ವಿಷ ಕುಡಿಸಲು ಒತ್ತಾಯ ಮಾಡಿರಬಹುದು. ಅದು ಸಾಧ್ಯವಾಗದೇ ಚೂರಿ ಇರಿದಿದ್ದಾನೆ. ಮೊದಲು ಕೊಲೆ ಪ್ರಕರಣ ದಾಖಲಿಸಿ, ಬಳಿಕ ಆರೋಪಿಯ ಆತ್ಮಹತ್ಯೆ ಪ್ರಕರಣ ದಾಖಲಿಸಬೇಕಾಗುತ್ತದೆ’ ಎಂದೂ ಅವರು ಮಾಹಿತಿ ನೀಡಿದರು.

ಡಿಸಿಪಿ ರೋಹನ್ ಜಗದೀಶ್, ಸಿಪಿಐ ಎಸ್.ಎಸ್.ಸಿಮಾನಿ, ಎಸಿಪಿ ಸಂತೋಷ ಸತ್ಯನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...