ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ಲಕ್ಷ್ಮಣ ಸವದಿ ವಿರುದ್ಧ ಮಹೇಶ ಕುಮಠಳ್ಳಿ ಸ್ಪರ್ಧೆ

Date:

ಬೆಳಗಾವಿಯ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಅಥಣಿಯಿಂದ ಲಕ್ಷ್ಮಣ ಸವದಿ ವಿರುದ್ಧ ಮಾಜಿ ಶಾಸಕ ಮಹೇಶ್ ಕುಮಠಳ್ಳಿ ಹಾಗೂ ಕಾಗವಾಡದಿಂದ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರ ಪುತ್ರ ಶ್ರೀನಿವಾಸ ಪಾಟೀಲ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಘೋಷಿಸಿದರು.

ಅಥಣಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, “ಜಾರಕಿಹೊಳಿ ಕುಟುಂಬ ಲಿಂಗಾಯತ ವಿರೋಧಿ ಅಲ್ಲ. ನಮ್ಮ ಮನೆಯಿಂದ ಯಾರೂ ಅಧ್ಯಕ್ಷರಾಗುವುದಿಲ್ಲ. ಲಿಂಗಾಯತ ಸಮುದಾಯದವರೇ ಅಧ್ಯಕ್ಷರಾಗಲಿದ್ದಾರೆ. ಅಥಣಿಯಲ್ಲಿ ಲಕ್ಷ್ಮಣ ಸವದಿಗೆ ಬುದ್ಧಿ ಕಲಿಸಲು ಕುಮಠಳ್ಳಿಯೇ ಅಭ್ಯರ್ಥಿ” ಎಂದು ಹೇಳಿದರು.

ಲಕ್ಷ್ಮಣ ಸವದಿ ವಿರುದ್ಧ ಕಿಡಿಕಾರಿದ ಜಾರಕಿಹೊಳಿ, “ಸವದಿ ಬಿಜೆಪಿ‌ಗೆ ದ್ರೋಹ ಮಾಡಿ ಕಾಂಗ್ರೆಸ್ ಸೇರಿದ್ದಾರೆ. ನಾನು ಕೂಡ 2023ರಲ್ಲಿ ಕಾಂಗ್ರೆಸ್‌ಗೆ ಹೋಗಬಹುದಾಗಿತ್ತು, ಆದರೆ ಪಕ್ಷದ ವಿರುದ್ಧ ಹೋಗಲಿಲ್ಲ. ಸವದಿ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಶಾಸಕ ಮಹೇಶ್ ಕುಮಠಳ್ಳಿ ಮಾತನಾಡಿ, “ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ರೈತರ ಹಿತಾಸಕ್ತಿ ಮುಖ್ಯ. ಆದರೆ ಅಥಣಿಯಲ್ಲಿ ಕೆಲವರಿಗೆ ಮಾತ್ರ ಸಾಲ ನೀಡಲಾಗುತ್ತಿದೆ. ಬಿಜೆಪಿ ಬೆಂಬಲಿಗರಿಗೆ ಸಾಲ ಸೌಲಭ್ಯ ನಿರಾಕರಿಸಲಾಗಿದೆ. ಇದೂ ರಾಜಕೀಯವೇ” ಎಂದು ಆರೋಪಿಸಿದರು.

ಅವರು 2019ರಲ್ಲಿ ರಮೇಶ್ ಕತ್ತಿ ಮತ್ತು ಉಮೇಶ್ ಕತ್ತಿ ಒತ್ತಡದ ಹಿನ್ನೆಲೆಯಲ್ಲಿ ಸ್ಪರ್ಧಿಸಿದ್ದನ್ನು ನೆನಪಿಸಿಕೊಂಡು, “ಈ ಬಾರಿ ಚುನಾವಣೆಗೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದೇನೆ. ಫಲಿತಾಂಶ ಏನೇ ಬರಲಿ ಸ್ಪರ್ಧೆ ಖಚಿತ” ಎಂದು ಹೇಳಿದರು.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಈ ಸಂದರ್ಭದಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ ಮುಖಂಡ ಸಿದ್ದಪ್ಪ ಮುದಕ್ಕಣ್ಣವರ, ಬಿಜೆಪಿ ಜಿಲ್ಲಾ ಅಧ್ಯಕ್ಷ ಡಾ. ರವಿ ಸಂಕ, ಉಪಾಧ್ಯಕ್ಷರು ಸಿದ್ದು ಪಾಟೀಲ, ಮಲ್ಲಪ್ಪಾ ಹಂಚಿನಾಳ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಅಣ್ಣಪ್ಪಾ ಹಳ್ಳೂರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...