ಬೆಳಗಾವಿ | ಕೆಎಸ್‌ಆರ್‌ಟಿಸಿ ಬಸ್‌ ನಲ್ಲೇ ಮೆಕ್ಯಾನಿಕ್ ಆತ್ಮಹತ್ಯೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ

Date:

ಕೆಎಸ್‌ಆರ್‌ಟಿಸಿ ಬಸ್‌ ನಲ್ಲೇ ಮೆಕ್ಯಾನಿಕ್ ಒಬ್ಬರು ನೇಣಿಗೆ ಶರಣಾದ ಘಟನೆ ಬೆಳಗಾವಿಯ ಡಿಪೋ-1ರಲ್ಲಿ ನಡೆದಿದೆ. ಹಳೆ ಗಾಂಧಿನಗರದ ನಿವಾಸಿ ಕೇಶವ ಕಮಡೊಳಿ (57) ಆತ್ಮಹತ್ಯೆ ಮಾಡಿಕೊಂಡವರು.

ಮೃತರು ಡಿಪೋದಲ್ಲಿ ಬಸ್ ವಾಶಿಂಗ್ ಕೆಲಸ ಮಾಡುತ್ತಿದ್ದರು. ಆದರೆ, ಪಂಚರ್ ತೆಗೆಯುವ ಕೆಲಸ ನೀಡಲಾಗಿದ್ದು, ಬೆನ್ನು ನೋವು ಇರುವುದರಿಂದ ಅವರನ್ನು ಬೇರೆ ಕೆಲಸಕ್ಕೆ ನಿಯೋಜಿಸಲು ಕುಟುಂಬಸ್ಥರು ಮನವಿ ಮಾಡಿದ್ದರು. ಇದನ್ನು ದಿಟ್ಟಿಸದೇ, ಡಿಪೋ ಮ್ಯಾನೇಜರ್ ಲಿಂಗರಾಜ ಲಾಠಿ ಮತ್ತು ಸಹಾಯಕ ಕಾರ್ಯ ಅಧೀಕ್ಷಕ ಅನಿಲ್ ಬಾಂದೇಕರ್ ಅವರು ಡ್ಯೂಟಿ ಬದಲಿಸದೆ ನಿರ್ಲಕ್ಷ್ಯ ತೋರಿದರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕೆಲಸದ ಒತ್ತಡವನ್ನು ತಡೆದುಕೊಳ್ಳಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಮಾರ್ಕೆಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರ ಕುಟುಂಬಸ್ಥರು ಸಂಬಂಧಿತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...