ಇಬ್ಬರು ಅಪ್ರಾಪ್ತ ಯುವಕರು ಕ್ಷುಲ್ಲಕ ಕಾರಣಕ್ಕಾಗಿ ಪರಸ್ಪರ ಜಗಳ ಮಾಡಿಕೊಂಡು, ಚಾಕು ಇರಿದುಕೊಂಡಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.
ಘಟನೆ ರಾಯಲ್ ಸ್ಕೂಲ್ ಬಳಿ ನಡೆದಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಮೊಹಮ್ಮದ್ ಖಾಜಿ ಅವರನ್ನು ಬಿಮ್ಸ್ ಆಸ್ಪತ್ರೆಗೆ ಹಾಗೂ ಮತ್ತೋರ್ವ ಮೊಹಮ್ಮದ್ ಅಟ್ಮಸ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ.





