ಬೆಳಗಾವಿ : ಆಪ್ತ ಕಾರ್ಯಕರ್ತನ ಅಂತ್ಯಕ್ರಿಯೆಯಲ್ಲಿ ಕಣ್ಣೀರಿಟ್ಟ ಶಾಸಕ ಅಶೋಕ ಪಟ್ಟಣ : ಮನಕಲಕುವ ಘಟನೆ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ಕ್ಷೇತ್ರದ ಶಾಸಕ ಅಶೋಕ ಪಟ್ಟಣ ಅವರ ಆಪ್ತ ಕಾರ್ಯಕರ್ತ ಹಾಗೂ ಪಿಕೆಪಿಎಸ್ ಮಾಜಿ ಅಧ್ಯಕ್ಷ ಗಿರಿಯಪ್ಪ ಗಂಟೋಟಿ (40) ಅವರ ಅಕಾಲಿಕ ನಿಧನದಿಂದ ರಾಜಕೀಯ ವಲಯದಲ್ಲಿ ಶೋಕದ ಅಲೆ ಎದ್ದಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ವಿಜಯೋತ್ಸವದ ಸಂಭ್ರಮಾಚರಣೆ ಬಳಿಕ ಗಿರಿಯಪ್ಪ ಗಂಟೋಟಿ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.

ಅಂತ್ಯಕ್ರಿಯೆ ವೇಳೆ ಶಾಸಕ ಅಶೋಕ ಪಟ್ಟಣ ಅವರು ಕಣ್ಣೀರನ್ನು ತಡೆಯಲಾಗದೆ ಭಾವುಕರಾದರು. ಪಾರ್ಥಿವ ದೇಹಕ್ಕೆ ಪುಷ್ಪಾರ್ಚನೆ ಮಾಡಿದ ನಂತರ ಶಾಸಕರ ಕಣ್ಣೀರಿನಿಂದ ಅಲ್ಲಿದ್ದ ಎಲ್ಲರೂ ಕಣ್ಣೀರಿಟ್ಟರು.
ಅಂತ್ಯಕ್ರಿಯೆಗೆ ನೂರಾರು ಜನರು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಗ್ರಾಮಸ್ಥರು ಸೇರಿದ್ದರು.

ಗಿರಿಯಪ್ಪ ಗಂಟೋಟಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಶಾಸಕ ಪಟ್ಟಣ ಅವರ ಹೋರಾಟದ ಹಾದಿಯ ಸಹಯಾತ್ರಿಯಾಗಿದ್ದರು. ಅವರ ಅಕಾಲಿಕ ನಿಧನವು ರಾಮದುರ್ಗ ರಾಜಕೀಯ ವಲಯಕ್ಕೆ ಅಳಿಯದ ನಷ್ಟವೆಂದು ಶಾಸಕರು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...