ಉದ್ಯೋಗದ ನಿಮಿತ್ತ ದುಬೈಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮೂವರು ಯುವಕರು ಅನಿವಾರ್ಯ ಪರಿಸ್ಥಿತಿಯಿಂದ ಅಲ್ಲಿ ಸಿಲುಕಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಹಾಗೂ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸಂಕಷ್ಟದಲ್ಲಿರುವ ಯುವಕರಲ್ಲಿ ಶಶಿಕಾಂತ ಸೇರಿದಂತೆ ಮೂವರು ಇದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ತಕ್ಷಣ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಅವರು ಶಶಿಕಾಂತರಿಗೆ ನೇರವಾಗಿ ವಾಟ್ಸಾಪ್ ವಿಡಿಯೋ ಕರೆ ಮಾಡಿ ಮಾತನಾಡಿ ಧೈರ್ಯ ತುಂಬಿದರು.
“ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ನಿಮ್ಮನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ವ್ಯವಸ್ಥೆಗಳು ಮಾಡಲಾಗಿದೆ. ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ,” ಎಂದು ಅವರು ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದಿರಾ ? ರಾಜ್ಯ ಬಜೆಟ್ | ನೀರಾವರಿ ಯೋಜನೆ ಪೂರ್ಣಗೊಳಿಸಿ, ಕೃಷಿಗೆ ವಿಶೇಷ ಅನುದಾನಕ್ಕೆ ಬೆಳಗಾವಿ ರೈತರ ನಿರೀಕ್ಷೆ
ಈ ಬೆಳವಣಿಗೆಯಿಂದ ಯುವಕರ ಕುಟುಂಬ ಸದಸ್ಯರು ನೆಮ್ಮದಿ ಕಂಡಿದ್ದು, ಆದಷ್ಟು ಬೇಗ ಅವರು ಸುರಕ್ಷಿತವಾಗಿ ಊರಿಗೆ ಮರಳಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.




