ಬೆಳಗಾವಿ | ಕಪ್ಪಲಗುದ್ದಿಯಲ್ಲಿ 7ರಿಂದ 9ರವರೆಗೆ ಮೋಬೈಲ್ ಟಿವಿ ನಿರ್ಬಂಧ

Date:

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ವಿದ್ಯಾರ್ಥಿಗಳ ಓದಿಗೆ ಉತ್ತೇಜನ ನೀಡುವ ಉದ್ದೇಶದಿಂದ ನಿತ್ಯ ಸಂಜೆ 7ರಿಂದ ರಾತ್ರಿ 9ರವರೆಗೆ ಟಿ.ವಿ ಮತ್ತು ಮೊಬೈಲ್‌ಫೋನ್ ಬಳಸದಂತೆ ಗ್ರಾಮ ಪಂಚಾಯಿತಿಯಲ್ಲಿ ಠರಾವ್ ಪಾಸ್‌ ಮಾಡಲಾಗಿದೆ. ಕಳೆದ ನಾಲ್ಕು ದಿನಗಳಿಂದ ಈ ನಿರ್ಧಾರವನ್ನು ಗ್ರಾಮಸ್ಥರ ಸಹಕಾರದಿಂದ ಯಶಸ್ವಿಯಾಗಿ ಪಾಲಿಸಲಾಗುತ್ತಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮಹಾದೇವ ನಾಯಕ, ಪಿಡಿಒ ಬಿ.ಎಸ್. ನಾಗನೂರ, ಎಸ್‌ಡಿಎಂಸಿ ಅಧ್ಯಕ್ಷ ಗುರು ಅಂಗಡಿ ಹಾಗೂ ಮುಖ್ಯ ಶಿಕ್ಷಕ ಪಿ.ಎಂ. ದಿವಾಕರ ಈ ಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಲಗಾ ಗ್ರಾಮದಲ್ಲಿ ತಿಂಗಳ ಹಿಂದೆ ಜಾರಿಗೊಂಡಿದ್ದ ಇಂತಹ ಪ್ರಯತ್ನದಿಂದ ಪ್ರೇರಣೆ ಪಡೆದು ಕಪ್ಪಲಗುದ್ದಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...