ಬೆಳಗಾವಿ : ತಾಯಿ-ಮಗು ಆಸ್ಪತ್ರೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ದಿಢೀರ್‌ ಭೇಟಿ

Date:

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ತಾಯಿ-ಮಗು ಆಸ್ಪತ್ರೆಗೆ ಚಿಕ್ಕೋಡಿ ಲೋಕಸಭಾ ಸದಸ್ಯೆ ಪ್ರಿಯಾಂಕಾ ಜಾರಕಿಹೊಳಿ ಅವರು ಮಂಗಳವಾರ ದಿಢೀರ್‌ ಭೇಟಿ ನೀಡಿ ಆಸ್ಪತ್ರೆಯ ಸೌಲಭ್ಯಗಳನ್ನು ಪರಿಶೀಲಿಸಿದರು.

ಆಸ್ಪತ್ರೆಯ ಬಾಣಂತಿ ವಾರ್ಡ್‌, ಶಸ್ತ್ರಚಿಕಿತ್ಸಾ ಘಟಕ, ಸ್ಕ್ಯಾನಿಂಗ್ ಕೇಂದ್ರ, ರಕ್ತ ತಪಾಸಣೆ ಘಟಕ ಸೇರಿದಂತೆ ಹಲವಾರು ವಿಭಾಗಗಳನ್ನು ವೀಕ್ಷಿಸಿದ ಸಂಸದೆಯವರು, ಬಾಣಂತಿಯರಿಂದ ಅಕ್ರಮ ಹಣ ವಸೂಲಿ, ಸ್ವಚ್ಛತೆಯ ಕೊರತೆ, ಸ್ತ್ರೀರೋಗ ತಜ್ಞರು ಲಭ್ಯವಿಲ್ಲದೆ ಗರ್ಭಿಣಿಯರನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತಿದೆ ಎಂಬ ಸಾರ್ವಜನಿಕ ದೂರುಗಳನ್ನು ಆಲಿಸಿದರು.

ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಡಿಎಚ್‌ಓ ಜೊತೆ ಮಾತನಾಡಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ತಾಯಿ-ಮಗು ಆಸ್ಪತ್ರೆಗೆ ಈಗಾಗಲೇ ಆಂಬುಲೆನ್ಸ್‌ ನೀಡಲಾಗಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆ ಸುತ್ತಮುತ್ತ ಬೀದಿ ದೀಪ ಅಳವಡಿಕೆ, ಭದ್ರತಾ ಸಿಬ್ಬಂದಿ ನೇಮಕ ಹಾಗೂ ಚಿಕ್ಕಮಕ್ಕಳ ತಜ್ಞರ ನಿಯುಕ್ತಿ ಸೇರಿದಂತೆ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದರು.

ಈ ವೇಳೆ ಸ್ತ್ರೀರೋಗ ತಜ್ಞೆ ಡಾ. ಜಯಲಕ್ಷ್ಮಿ ಮುಸಾಳೆ ಹಾಜರಿರಲಿಲ್ಲ. ನಂತರ ಅವರು ಆಗಮಿಸಿ ಆಸ್ಪತ್ರೆಯ ಕಾರ್ಯವೈಖರಿಯ ಕುರಿತು ಸಂಸದೆಯವರಿಗೆ ಮಾಹಿತಿ ನೀಡಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...