ಬೆಳಗಾವಿ : ಸಂಧಾನ ಸಭೆಯಲ್ಲಿ ಹತ್ಯೆ : ಮೂವರು ಆರೋಪಿಗಳ ಬಂಧನ

Date:

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಗಾಂಧಿನಗರದಲ್ಲಿ ರವಿವಾರ ನಡೆದ ಸಂಧಾನ ಸಭೆಯ ಮಧ್ಯೆ 32 ವರ್ಷದ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಪತ್ನಿಯೊಂದಿಗೆ ಅನುಚಿತ ಸಂಬಂಧ ಹೊಂದಿದ್ದ ಸ್ಥಳೀಯ ಯುವಕನ ವಿರುದ್ಧ ಮೃತ ಯುವಕ ತನ್ನ ಆಕ್ರೋಶ ವ್ಯಕ್ತಪಡಿಸಿದ್ದನ್ನು ಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ. ಘಟನೆಯ ಸಂಬಂಧ ಮೂವರು ಆರೋಪಿಗಳನ್ನು ಖಾನಾಪುರ ಪೊಲೀಸರು ಬಂಧಿಸಿದ್ದಾರೆ.

ಮೃತ ವ್ಯಕ್ತಿ ಧಾರವಾಡ ಜಿಲ್ಲೆಯ ತೇಗೂರ ಗ್ರಾಮದ ಮೂಲ ನಿವಾಸಿ ಸುರೇಶ್ ತಿಮ್ಮಣ್ಣ ಬಂಡಿವಡ್ಡರ (32). ಇತ್ತೀಚೆಗೆ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಖಾನಾಪುರದ ಗಾಂಧಿನಗರದಲ್ಲಿ ವಾಸವಾಗಿದ್ದರು. ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ಸುರೇಶ್ ಅವರ ಪತ್ನಿಯೊಂದಿಗೆ ಗಾಂಧಿನಗರದ ನಿವಾಸಿ ಅನಿಲ್ ಬಂಡಿವಡ್ಡರ್ (25) ಎಂಬವನಿಗೆ ಅನೈತಿಕ ಸಂಬಂಧವಿತ್ತು ಎನ್ನಲಾಗಿದೆ. ಈ ಕಾರಣದಿಂದ ಸುರೇಶ್ ಹಾಗೂ ಅನಿಲ್ ನಡುವೆ ಹಲವು ದಿನಗಳಿಂದ ವೈಷಮ್ಯವಿದ್ದು, ಇವರ ಮಧ್ಯೆ ನಡೆಯುತ್ತಿದ್ದ ಜಗಳವನ್ನು ಬಗೆಹರಿಸಲು ರವಿವಾರ ಗಾಂಧಿನಗರದ ಶನಿ-ಮಾರುತಿ ಮಂದಿರದಲ್ಲಿ ಗ್ರಾಮಸ್ಥರು ಸಂಧಾನ ಸಭೆ ಏರ್ಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯ ವೇಳೆ ಮಾತಿಗೆ ಮಾತು ಬೆಳೆದು, ವಿರೋಧಕ್ಕೆ ತಿರುಗಿದ ಮಾತುಕತೆಯ ಮಧ್ಯೆ ಅನಿಲ್, ಅವನ ತಂದೆ ಯಲ್ಲಪ್ಪ ಬಂಡಿವಡ್ಡರ್ (60) ಹಾಗೂ ತಾಯಿ ಸಾವಿತ್ರಿ ಬಂಡಿವಡ್ಡರ್ (55) ಸೇರಿ ಸುರೇಶ್ ಮೇಲೆ ಹಲ್ಲೆ ನಡೆಸಿದರೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಯಲ್ಲಪ್ಪ ಚಾಕುವಿನಿಂದ ಹೊಟ್ಟೆಯ ಭಾಗಕ್ಕೆ ಇರಿದ ಪರಿಣಾಮ ಸುರೇಶ್ ಬಡಿದಿದ್ದ ಜಾಗದಲ್ಲೇ ಗಂಭೀರವಾಗಿ ಗಾಯಗೊಂಡರು.

ತಕ್ಷಣ ಅವರನ್ನು ಖಾನಾಪುರ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿರುವ ಸಂದರ್ಭದಲ್ಲಿ ಮಾರ್ಗಮಧ್ಯೆ ಅವರು ಸಾವನ್ನಪ್ಪಿದರು.

ಘಟನೆಯ ಸಂದರ್ಭದಲ್ಲೇ ಮಧ್ಯೆ ಪ್ರವೇಶಿಸಿ ಜಗಳ ನಿವಾರಣೆಗೆ ಮುಂದಾದ ಸುರೇಶ್‌ನ ಸ್ನೇಹಿತ ಸಾಗರ್ ಅಷ್ಟೇಕರ್ಗೂ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಬೈಲಹೊಂಗಲ ಉಪ ವಿಭಾಗದ ಪೊಲೀಸ್ ಅಧಿಕಾರಿಗಳು (ಡಿವೈಎಸ್‌ಪಿ) ವಿರೇಶ್ ಹಿರೇಮಠ, ಹಾಗೂ ಖಾನಾಪುರ ಠಾಣೆ ಪಿಎಸ್‌ಐ ಎಲ್.ಎಫ್ ಗೌಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಾಲಯದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿ, ಪ್ರಕರಣದ ತನಿಖೆ ಮುಂದುವರೆದಿದೆ.

ಘಟನೆಯ ಬಳಿಕ ಯಲ್ಲಪ್ಪ ಬಂಡಿವಡ್ಡರ್ ಕೊಲೆ ಮಾಡಿದ ಚಾಕುವಿನೊಂದಿಗೆ ನೇರವಾಗಿ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಪ್ರಕರಣದಲ್ಲಿ ಆರೋಪಿತರು ಪೋಲೀಸರ ತನಿಖೆಗೂ ಸಹಕಾರ ನೀಡುತ್ತಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...