ಬೆಳಗಾವಿ : ಅಕ್ಕನ ಜೊತೆ ಸೇರಿಕೊಂಡು ಮಾವನ ಕೊಲೆ : ಶಿಕ್ಷೆ ಪ್ರಕಟ

Date:

ಅಕ್ಕನೊಂದಿಗೆ ಸೇರಿಕೊಂಡು ಮಾವನ ಕೊಲೆ ಮಾಡಿದ ಆರೋಪಿಗಳಿಗೆ ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ತಾರಕೇಶ್ವರಗೌಡ ಪಾಟೀಲ ಅವರು ಜೀವಾವಧಿ ಶಿಕ್ಷೆ ಮತ್ತು ₹1.40 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಈ ಪ್ರಕರಣ 2020ರ ಸೆಪ್ಟೆಂಬರ್ 3ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚಿನಾಳ ಕೆ.ಎಸ್. ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ನೇರಲಿ ಗ್ರಾಮದ ಸಚಿನ್‌ ಬೋಪಲೆ ಎಂಬಾತನು ತನ್ನ ಪತ್ನಿ ಅನಿತಾಳ ಮೇಲೆ ಅನುಮಾನ ಹೊಂದಿದ್ದ. ವಿಷಯ ಪರಿಹರಿಸಲು ಕುಟುಂಬಸ್ಥರನ್ನು ಕರೆಸಿ ಮಾತುಕತೆ ನಡೆಸುತ್ತಿದ್ದ ವೇಳೆ ಜಗಳ ನಡೆದು ಕೊಲೆಗೆ ಕಾರಣವಾಗಿತ್ತು

ಆರೋಪಿಗಳು ಸಚಿನ್ ಬೋಪಲೆ ಅವರನ್ನು ಕೊಂದು, ಜೆಸಿಬಿಯಿಂದ ಗುಂಡಿ ಅಗೆದು ಶವ ಮುಚ್ಚಲು ಯತ್ನಿಸುತ್ತಿದ್ದ ವೇಳೆ ಜೆಸಿಬಿ ಚಾಲಕ ಸುನೀಲ ರಾಥೋಡ ಶವವನ್ನು ನೋಡುತ್ತಾನೆ. ಆತನು ಯಾರಿಗಾದರೂ ಹೇಳಿದರೆ ನಿನ್ನೂ ಕೊಲ್ಲುತ್ತೇವೆ ಎಂದು ಆರೋಪಿ ಕೃಷ್ಣಾ ಅಲಿಯಾಸ್ ಪಿಂಟೂ ರಾಜಾರಾಮ ಘಾಟಗೆ ಬೆದರಿಕೆ ಹಾಕಿದ್ದ. ಬಳಿಕ ರಾಥೋಡ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...