ಬೆಳಗಾವಿ | ದಲಿತ ಸಭೆ ನಡೆಸದೆ ನಿರ್ಲಕ್ಷ್ಯ : ಪೊಲೀಸರ ಅಧಿಕಾರಿಗಳ ವಿರುದ್ಧ ದೂರು

Date:

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಪೊಲೀಸ್‌ ಠಾಣೆಯಲ್ಲಿ ಸರ್ಕಾರದ ಆದೇಶವಿದ್ದರೂ ಕಳೆದ 8 ತಿಂಗಳಿಂದ ದಲಿತರ ಸಭೆ ನಡೆಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಅಂಬೇಡ್ಕ‌ರ್ ಸೇವಾ ಸಮಿತಿ ಅಧ್ಯಕ್ಷ ಸಂತೋಷ ತಳವಾರ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ.

ಪೊಲೀಸ್‌ ಠಾಣೆಗಳಲ್ಲಿ ಪ್ರತಿ ತಿಂಗಳ ಎರಡನೇ ಭಾನುವಾರ ದಲಿತರ ಸಭೆ ನಡೆಸಬೇಕು ಎಂದು ಸರ್ಕಾರದ ಆದೇಶವಿದ್ದರೂ ನಂದಗಡ ಠಾಣೆಯಲ್ಲಿ ಸಭೆ ನಡೆಸಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ. ಈ ಕುರಿತು ಮಾಹಿತಿ ಕೇಳಲು ತೆರಳಿದಾಗ ಅಧಿಕಾರಿಗಳು ಮಾಹಿತಿ ನೀಡಲು ನಿರಾಕರಿಸಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿ ಮನವಿ ಸಲ್ಲಿಸಿದರೂ ಎರಡು ತಿಂಗಳಾದರೂ ಮಾಹಿತಿ ನೀಡಿಲ್ಲ ಎಂದು ತಿಳಿಸಿದ್ದಾರೆ.

ಹೀಗಾಗಿ ಮಾಹಿತಿ ಹಕ್ಕಿನಡಿ ಮಾಹಿತಿ ನೀಡದ ಹಾಗೂ ದಲಿತರ ಸಭೆ ಆಯೋಜನೆ ಮಾಡದ ನಂದಗಡ ಠಾಣೆಯ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...