ಗೃಹಲಕ್ಷ್ಮೀ ಯೋಜನೆ ಹಣ ಜಮಾ ಕುರಿತು ಸದನಕ್ಕೆ ಯಾವುದೇ ತಪ್ಪು ಮಾಹಿತಿ ನೀಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ಇದುವರೆಗೆ 23 ಕಂತುಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದು ಸದನಕ್ಕೆ ತಿಳಿಸಲಾಗಿದೆ ಎಂದು ಅವರು ಹೇಳಿದರು. ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಇನ್ನೂ ಜಮಾ ಆಗಿಲ್ಲ ಎಂಬ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದು, ಜಮಾ ಆಗಿಲ್ಲದ ಹಣವನ್ನು ಶೀಘ್ರದಲ್ಲಿ ಹಾಕುವುದಾಗಿ ಭರವಸೆ ನೀಡಲಾಗಿದೆ ಎಂದು ತಿಳಿಸಿದರು.
ಗೃಹಲಕ್ಷ್ಮೀ ಯೋಜನೆ ಯಶಸ್ವಿಯಾಗಿ ಕೋಟ್ಯಂತರ ಮಹಿಳೆಯರ ಬದುಕಿಗೆ ಆಸರೆಯಾಗಿದ್ದು, ಅದರ ಯಶಸ್ಸಿಗೆ ಮಸಿ ಬಳಿಯುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಸಚಿವೆ ಆಕ್ರೋಶ ವ್ಯಕ್ತಪಡಿಸಿದರು.





