ಬೆಳಗಾವಿ : ಸಾರಿಗೆ ಇಲಾಖೆಗೆ ಒಂದೇ ದಿನ ಗಡುವು: ನಾಳೆ ಬಸ್ ಬಿಟ್ಟಿಲ್ಲ ಎಂದರೆ ವಿದ್ಯಾರ್ಥಿಗಳಿಂದ ಪ್ರತಿಭಟನೆಯ ಎಚ್ಚರಿಕೆ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಮತ್ತು ವೆಂಕಟಾಪೂರ ಗ್ರಾಮಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹಲವು ವರ್ಷಗಳಿಂದ ಎದುರಿಸುತ್ತಿರುವ ಸಾರಿಗೆ ತೊಂದರೆ ಮತ್ತೊಮ್ಮೆ ತೀವ್ರತೆ ಪಡೆದುಕೊಂಡಿದ್ದು, ರಾಮದುರ್ಗ KSRTC ಡಿಪೋದ ಎದುರು ದಿನಾಂಕ 20ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮೂರು ದಿನಗಳ ಗಡುವನ್ನು ನೀಡಿದ್ದರು ಕಾರಣ, ನಾಳೆ ಬೆಳಿಗ್ಗೆ 7:30ಕ್ಕೆ ಹೆಚ್ಚುವರಿ ಬಸ್ ಬಿಡದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

ಸಾಲಾಪೂರ, ವೆಂಕಟಾಪೂರ, ದಾಡಿಬಾವಿ ಹಾಗೂ ಸುತ್ತಮುತ್ತಲಿನ ತಾಂಡಾಗಳಿಂದ ಪ್ರತಿದಿನ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಲೋಕಾಪೂರಕ್ಕೆ ಕಾಲೇಜು ಶಿಕ್ಷಣಕ್ಕಾಗಿ ತೆರಳುತ್ತಾರೆ. ಜೊತೆಗೆ ನೂರಾರು ಕೂಲಿ ಕಾರ್ಮಿಕರು ಸಹ ಇದೇ ಮಾರ್ಗದಲ್ಲಿ ಸಂಚರಿಸುತ್ತಾರೆ. ಬೆಳಿಗ್ಗೆ 8 ಗಂಟೆಗೆ ಇರುವ ಒಂದೇ KSRTC ಬಸ್‌ನಲ್ಲೇ ಎಲ್ಲಾ ಪ್ರಯಾಣಿಕರು ತೆರಳಬೇಕಾದ ಕಾರಣ, ದೈನಂದಿನ ಸಂಚಾರ ಸಂಕಷ್ಟವಾಗಿದೆ. ಬಸ್‌ನಲ್ಲಿ 150ಕ್ಕೂ ಹೆಚ್ಚು ಪ್ರಯಾಣಿಕರು ಕಿಕ್ಕಿರಿದು ಹೋಗುವುದು ಸಾಮಾನ್ಯವಾಗಿದ್ದು, ಹಲವಾರು ವಿದ್ಯಾರ್ಥಿಗಳು ಸ್ಥಳವಿಲ್ಲದೆ ಕಾಲೇಜಿಗೆ ಗೈರಾಗುವ ಪರಿಸ್ಥಿತಿ ಉಂಟಾಗಿದೆ.

1000988710

ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿನಿ ಪವಿತ್ರಾ ಅವರು ಮಾತನಾಡುವಾಗ, ಬಸ್ ಸಮಸ್ಯೆಯನ್ನು ಕಳೆದ ಹಲವು ವರ್ಷಗಳಿಂದ ಅಧಿಕಾರಿಗಳ ಗಮನಕ್ಕೆ ತಂದರೂ ಪರಿಹಾರವಾಗಿಲ್ಲವೆಂದು ಆರೋಪಿಸಿದರು. ಒಂದೇ ಬಸ್‌ನಲ್ಲಿ ನಿಂತುಕೊಂಡೇ ಪ್ರಯಾಣ ಮಾಡಬೇಕಾದ ಸ್ಥಿತಿ ಮುಂದುವರಿದಿದೆ. ಬಸ್ ಸಮಯಕ್ಕೆ ಬರುವುದಿಲ್ಲ ಮತ್ತು ಕೆಲವೊಮ್ಮೆ ಬಂದೇ ಬರುವುದಿಲ್ಲ. ವಿದ್ಯಾರ್ಥಿಗಳು ಸಮಸ್ಯೆ ತಿಳಿಸಿದಾಗ KSRTC ಸಿಬ್ಬಂದಿ ಪ್ರತಿಕ್ರಿಯಿಸುವ ಬದಲು ಪೊಲೀಸ್ ಇಲಾಖೆಗೆ ಮಾಹಿತಿಯನ್ನು ನೀಡಿ ಹೆದರಿಕೆ ಹುಟ್ಟಿಸುವ ಪ್ರಯತ್ನ ಮಾಡುತ್ತಾರೆ ಎಂದು ಅವರು ಹೇಳಿದರು. ನಮ್ಮ ಊರಿಗೆ ಬೆಳಿಗ್ಗೆ 7:30ಕ್ಕೆ ಹೆಚ್ಚುವರಿ ಬಸ್ ನೀಡದಿದ್ದರೆ ತೀವ್ರ ಮಟ್ಟದ ಹೋರಾಟಕ್ಕೆ ಇಳಿಯುವುದಾಗಿ ಎಚ್ಚರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿನಿ ಲಕ್ಷ್ಮೀ ಮಾತನಾಡುವಾಗ, ವೆಂಕಟಾಪೂರ ಚಿಕ್ಕ ಹಳ್ಳಿ ಎನ್ನುವುದರಿಂದ ಕೆಲಬಾರಿ ಬಸ್ ನಿಲುತ್ತಲೇ ಹೋಗುವುದಿಲ್ಲ. ಇದರಿಂದ ವಿದ್ಯಾರ್ಥಿಗಳು ಕ್ರಾಸ್‌ನಿಂದ ನಡೆದುಕೊಂಡು ಊರಿಗೆ ಬರಬೇಕಾಗುತ್ತದೆ. ಯಾವುದೇ ಬಸ್ ಸಮಯಕ್ಕೆ ಬರುವುದಿಲ್ಲ ಮತ್ತು ಅಧಿಕಾರಿಗಳ ಉತ್ತರ ಉಡಾಫೆಯಾಗಿರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

1000988727

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಸಾರಿಗೆ ಇಲಾಖೆಯ ಕೆಲಸದ ಶೈಲಿಗೂ ಗಂಭೀರ ಟೀಕೆ ಮಾಡಿದ್ದರು. ಡಿಪೋಗೆ ಮನವಿ ಸಲ್ಲಿಸಲು ಬಂದಾಗ “ನಾಳೆ ಮಾಡ್ತೀವಿ”, “ಮೂರು ದಿನ ಬಿಡಿ”, “ಮ್ಯಾನೇಜರ್ ಇಲ್ಲ” ಎಂಬ ರೀತಿಯ ಉತ್ತರ ಮಾತ್ರ ಸಿಗುತ್ತದೆ. ವಿದ್ಯಾರ್ಥಿಗಳು ಹಸಿದ ಹೊಟ್ಟೆಯಲ್ಲಿ ದೂರದ ಊರುಗಳಿಂದ ಬಂದು ಮನವಿ ಸಲ್ಲಿಸಿದರೂ ಮಾನವೀಯ ಸ್ಪಂದನೆ ಕಾಣಿಸದೇ ಇರುವುದನ್ನು ಗ್ರಾಮಸ್ಥರು ಟೀಕಿಸಿದ್ದರು.

1000988708

ಈ ಕುರಿತು ಈದಿನ.ಕಾಮ್ ರಾಮದುರ್ಗ KSRTC ಡಿಪೋ ಮ್ಯಾನೇಜರ್ ಅವರನ್ನು ಸಂಪರ್ಕಿಸಿದಾಗ, ಡಿಪೋದಲ್ಲಿ ಒಟ್ಟು 106 ಬಸ್‌ಗಳು ಮಾತ್ರ ಇರುವುದರಿಂದ ಹೊಸ ಮಾರ್ಗಗಳಿಗೆ ಅಥವಾ ಹೆಚ್ಚುವರಿ ಪ್ರಯಾಣಗಳಿಗೆ ಬಸ್‌ಗಳನ್ನು ಬಿಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ಶಾಸಕರಾದ ಅಶೋಕ ಪಟ್ಟಣ ಅವರಿಗೆ ಹೊಸ ಬಸ್‌ಗಳನ್ನು ನೀಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಇದುವರೆಗೆ ಯಾವುದೇ ಬಸ್‌ಗಳನ್ನು ಮಂಜೂರು ಮಾಡಲಾಗಿಲ್ಲ ಎಂಬುದನ್ನು ಮ್ಯಾನೇಜರ್ ತಿಳಿಸಿದ್ದಾರೆ.

ಸಾಲಾಪೂರ ಮತ್ತು ವೆಂಕಟಾಪೂರ ಹಾಗೂ ದಾಡಿಬಾವಿ, ಸುತ್ತಮುತ್ತಲಿನ ತಾಂಡಾಗಳಲ್ಲೂ ನೂರಾರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ದೈನಂದಿನ ಸಂಚಾರ ಸಮಸ್ಯೆಯಿಂದ ಪರದಾಡುತ್ತಿದ್ದಾರೆ. ಈ ಕುರಿತು ಶಾಸಕ ಅಶೋಕ ಪಟ್ಟಣ ಹಾಗೂ ಸಾರಿಗೆ ಇಲಾಖೆಯ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು, ಸಾರ್ವಜನಿಕರ ಧ್ವನಿಯನ್ನು ಯಾರೂ ಕೇಳದ ಕಾರಣ, ನಾಳೆ ಬಸ್ ಬರದಿದ್ದರೆ ಹೋರಾಟ ಮಾತ್ರವೇ ಉಳಿದಿದೆ ಎಂದು ಅವರು ಹೇಳಿದ್ದಾರೆ.

ಸಾರಿಗೆ ಇಲಾಖೆಯ ಅಧಿಕಾರಿಗಳು ಪ್ರತಿಭಟನೆಯ ಸಮಯದಲ್ಲಿ ವಿದ್ಯಾರ್ಥಿಗಳ ಬೇಡಿಕೆಗೆ ಮೂವರು ದಿನಗಳ ಗಡುವು ಕೇಳಿದ್ದರು. ನಾಳೆ ಹೆಚ್ಚುವರಿ ಬಸ್ ಬಿಡದಿದ್ದರೆ KSRTC ಡಿಪೋ ಎದುರು ಉಗ್ರ ಪ್ರತಿಭಟನೆ ನಡೆಸುವುದಾಗಿ ವಿದ್ಯಾರ್ಥಿಗಳು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...