ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಹೊರವಲಯದಲ್ಲಿ ಪಿಎಂ-ಕುಸುಮ್ ಸೌರ ಯೋಜನೆ ಹೆಸರಿನಲ್ಲಿ ಅನುಮತಿ ಇಲ್ಲದೇ ಮರ ಕಡಿತಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಬಂಧಿತನ ಹೆಸರು ಬಹಿರಂಗಪಡಿಸದಿರುವುದು ಅನುಮಾನಕ್ಕೆ ಕಾರಣವಾಗಿದೆ.
ಕೌರಿಗುಡಾ ರೇಣುಕಾದೇವಿ ದೇವಸ್ಥಾನದ ಸುತ್ತಮುತ್ತಲಿನ 40 ಎಕರೆ ಗಾಯರಾಣ ಜಮೀನಿನಲ್ಲಿ ಸೌರ ಘಟಕಕ್ಕೆ ಜಿಲ್ಲಾಧಿಕಾರಿ ಹಾಗೂ ಹೆಸ್ಕಾಂ ಅನುಮತಿ ನೀಡಿದ್ದರೂ, ಮರ ಕಡಿತಕ್ಕೆ ಅರಣ್ಯ ಇಲಾಖೆಯ ಅನುಮತಿ ಪಡೆಯಲಾಗಿರಲಿಲ್ಲ. ಆರೋಪಿಗಳು ಸುಮಾರು ಎಂಟು ಎಕರೆ ಪ್ರದೇಶದಲ್ಲಿದ್ದ ಸಣ್ಣ ಗಂಧದ ಮರಗಳು ಸೇರಿದಂತೆ ಸಾವಿರಾರು ಮರಗಳನ್ನು ಕಡಿತಗೊಳಿಸಿದ್ದಾರೆ.
ಡಿಸಿಎಫ್ ಕ್ರಾಂತಿ ಅವರು ಈ ಕುರಿತು ಎಫ್‌ಐಆರ್ ದಾಖಲಾಗಿದ್ದು, ಒಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ 10 ಸಾವಿರಕ್ಕೂ ಹೆಚ್ಚು ಮರಗಳು ನಾಶವಾಗಿವೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದಿರಾ ? ವಂಟಮೂರಿ ತೀರ್ಪೊಂದು ಸಾಕೇ? ತೆರೆಮರೆಗೆ ಸರಿದ ಪ್ರಕರಣಗಳಿಗೆ ನ್ಯಾಯ ಯಾವಾಗ?
ಈ ಜಾಗದ ಬಳಿ 55 ಎಕರೆ ಬಂಜರು ಭೂಮಿ ಇದ್ದರೂ ಅರಣ್ಯವನ್ನೇ ಬಳಸಿರುವುದೇಕೆ ಎಂಬ ಪ್ರಶ್ನೆ ಮೂಡಿದ್ದು ಇದರ ಹಿಂದೆ ರಾಜಕೀಯ ಕೈವಾಡವಿದೆ ಎಂದು ಆರೋಪಿಸಿ ಫೆ.6ರಂದು ರೈತ ಸಂಘಟನೆಗಳು ಹಾಗೂ ಗ್ರಾಮಸ್ಥರು ಡಿಸಿಎಫ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.




