ಬೆಳಗಾವಿ : ಪರಸಗಡ ನಾಟಕೋತ್ಸವ: ರಂಗ ಆರಾಧಕ–ರಂಗ ಚಂದ್ರ ಪ್ರಶಸ್ತಿಗಳಿಗೆ ಆಯ್ಕೆ

Date:

ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆಯಿಂದ ಪ್ರತಿ ವರ್ಷ ನೀಡಲಾಗುವ ರಂಗ ಆರಾಧಕ ಹಾಗೂ ರಂಗ ಚಂದ್ರ ಪ್ರಶಸ್ತಿಗಳನ್ನು ಈ ಬಾರಿ ಮೂರು ದಶಕಗಳಿಗೂ ಅಧಿಕ ಕಾಲ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಸಾಧಕರಿಗೆ ಪ್ರದಾನ ಮಾಡಲಾಗುತ್ತಿದೆ.


ಶ್ರೀಯುತ ರುದ್ರಪ್ಪ ರಾಜಪ್ಪ ಶಿಂಧೆ ಅವರು ನೀಡುವ ರಂಗ ಆರಾಧಕ ಪ್ರಶಸ್ತಿ ಹಾಗೂ ದಿವಂಗತ ಹಿರಿಯ ನ್ಯಾಯವಾದಿ ವ್ಹಿ.ಆರ್.ಕಾರದಗಿ ಅವರ ಸ್ಮರಣಾರ್ಥ ನೀಡುವ ರಂಗ ಆರಾಧಕ ಪ್ರಶಸ್ತಿಗೆ ಧಾರವಾಡದ ರಂಗಕರ್ಮಿ ದಂಪತಿಗಳಾದ ಗೊಂಬೆ ಮನೆಯ ಡಾ.ಪ್ರಕಾಶ ಗರುಡ ಮತ್ತು ಶ್ರೀಮತಿ ರಜನಿ ಪ್ರಕಾಶ ಗರುಡ ಅವರು ಆಯ್ಕೆಯಾಗಿದ್ದಾರೆ.


ರಂಗ ಆರಾಧನಾ ಸಂಸ್ಥೆಯ ಹಿರಿಯ ಪೋಷಕರಾದ ದಿವಂಗತ ಚಂದ್ರಕಾಂತ ಸುಳ್ಳದ ಅವರ ಸ್ಮರಣಾರ್ಥ ನೀಡುವ ರಂಗ ಚಂದ್ರ ಪ್ರಶಸ್ತಿಗೆ ಧಾರವಾಡದ ಜಾನಪದ ಸಂಶೋಧನಾ ಕೇಂದ್ರದ ಶ್ರೀಮತಿ ವಿಶ್ವೇಶ್ವರಿ ಬಸಲಿಂಗಯ್ಯ ಹಿರೇಮಠ ಅವರು ಭಾಜನರಾಗಿದ್ದಾರೆ. ಪ್ರತಿ ಪ್ರಶಸ್ತಿಯು ರೂ.5,000 ನಗದು ಹಾಗೂ ಸ್ಮರಣ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ನಾಟಕೋತ್ಸವದ ಮೊದಲ ದಿನ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...


ಈ ವರ್ಷದ ಪರಸಗಡ ನಾಟಕೋತ್ಸವವು ಜನವರಿ 24 ರಿಂದ ಫೆಬ್ರವರಿ 2ರವರೆಗೆ ಹತ್ತು ದಿನಗಳ ಕಾಲ ನಡೆಯಲಿದೆ. ಉತ್ಸವದಲ್ಲಿ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆಯಿಂದ ಬಿರುಕು, ಮಾಂತಮಲ್ಲಯ್ಯ; ರಂಗಾಯಣ ಧಾರವಾಡದಿಂದ ಕಂದಗಲ್ಲರಿಗೆ ನಮಸ್ಕಾರ (ಕಂದಗಲ್ಲ ಭಾರತ); ಬೆಳಗಾವಿಯ ವೇನಾಸಂ ತಂಡದಿಂದ ಸಾಹೇಬರು ಸಾಕದ ನಾಯಿ; ಉಡುಪಿಯ ಕೊಡವೂರು ಸುಮನಸಾ ತಂಡದಿಂದ ಈದಿ ಹಾಗೂ ಶಿಕಾರಿ; ಧಾರವಾಡದ ರಂಗ ಸಾಮ್ರಾಟ ರಂಗಶಾಲೆಯಿಂದ ಅಪ್ಪ ಅವ್ವ.ಕಾಮ್ ನಾಟಕಗಳು ಪ್ರದರ್ಶನಗೊಳ್ಳಲಿವೆ.


ಇದಲ್ಲದೆ ಶಿವ ಸಂಚಾರ ಸಾಣೇಹಳ್ಳಿಯಿಂದ ಜಂಗಮದೆಡೆಗೆ, ಶಿವಯೋಗಿ ಸಿದ್ದರಾಮೇಶ್ವರ ಮತ್ತು ಕಳ್ಳರ ಸಂತೆ ನಾಟಕಗಳು ಪ್ರದರ್ಶನಗೊಳ್ಳಲಿದ್ದು ಶಿವಯೋಗಿ ಸಿದ್ದರಾಮೇಶ್ವರ ನಾಟಕವು ನಾಡೋಜ ನಾಟ್ಯ ಭೂಷಣ ಏಣಗಿ ಬಾಳಪ್ಪನವರ ಸ್ಮರಣಾರ್ಥ ಪ್ರದರ್ಶನಗೊಳ್ಳಲಿದೆ ಎಂದು ಸಂಘಟನೆಯ ಅಧ್ಯಕ್ಷ ಶ್ರೀನಿವಾಸ ಗದಗ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...