ಬೆಳಗಾವಿ : ತಾಂತ್ರಿಕ ದೋಷದಿಂದ ವಿಮಾನ ವಾಪಸ್ ತಪ್ಪಿದ ಅನಾಹುತ

Date:

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಶನಿವಾರ ಮುಂಜಾನೆ ಮುಂಬೈಗೆ ತೆರಳುತ್ತಿದ್ದ ಸ್ಟಾರ್ ಏರ್ ವಿಮಾನ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅರ್ಧ ದಾರಿಯಿಂದಲೇ ವಾಪಸ್ ಆಗಿದೆ.

ಸ್ಟಾರ್ ಏರ್‌ನ ಎಸ್‌5111 ವಿಮಾನ ಬೆಳಿಗ್ಗೆ 7.50ಕ್ಕೆ ಬೆಳಗಾವಿಯಿಂದ ಟೇಕಾಫ್ ಆಗಿದ್ದು, 8.50ಕ್ಕೆ ಮುಂಬೈ ತಲುಪಬೇಕಿತ್ತು. ಆದರೆ ತಾಂತ್ರಿಕ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ, ವಿಮಾನ ಮುಂಬೈಗೆ ಹೋಗದೆ ಬೆಳಿಗ್ಗೆ 8.30ಕ್ಕೆ ಬೆಳಗಾವಿಯಲ್ಲೇ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಈ ವಿಮಾನದಲ್ಲಿ 48 ಮಂದಿ ಪ್ರಯಾಣಿಕರಿದ್ದರು.

“ವಿಮಾನ ತುರ್ತು ಭೂಸ್ಪರ್ಶ ಮಾಡಿಲ್ಲ. ಸಹಜವಾಗಿಯೇ ಟರ್ಮಿನಲ್‌ಗೆ ಬಂದು ಇಳಿದಿದೆ. ಪ್ರಯಾಣಿಕರನ್ನು ಮತ್ತೊಂದು ವಿಮಾನದಲ್ಲಿ ಮುಂಬೈಗೆ ಕಳುಹಿಸಲಾಗಿದೆ,” ಎಂದು ಸಾಂಬ್ರಾ ವಿಮಾನ ನಿಲ್ದಾಣ ನಿರ್ದೇಶಕ ಎಸ್. ತ್ಯಾಗರಾಜನ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾದ ಕ್ಷಣದಲ್ಲಿ ಪ್ರಯಾಣಿಕರಲ್ಲಿ ಆತಂಕ ಮೂಡಿದ್ದರೂ, ವಿಮಾನ ಸುರಕ್ಷಿತವಾಗಿ ಇಳಿದ ಹಿನ್ನೆಲೆಯಲ್ಲಿ ದೊಡ್ಡ ಅನಾಹುತ ತಪ್ಪಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...